ಒಡಿಶಾ ರೈಲು ದುರಂತ: ಅಪಘಾತ ಸಂಭವಿಸಿದ ಸ್ಥಳಕ್ಕೆ, ಕಟಕ್ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ 

ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 238ಕ್ಕೆ ಏರಿಕೆಯಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Updated on: 

ನವದೆಹಲಿ: ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 238ಕ್ಕೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರೈಲ್ವೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸರ್ಕಾರದ ಮೂಲಗಳ ಪ್ರಕಾರ, ಇಂದು ಸಭೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾಗೆ ತೆರಳಲಿದ್ದಾರೆ. ಮೊದಲು ಬಾಲಸೋರ್‌ನಲ್ಲಿ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ನಂತರ ಕಟಕ್‌ನ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com