ಒಡಿಶಾ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, ವಿರಾಟ್‌ ಕೊಹ್ಲಿ, ಸಲ್ಮಾನ್ ಖಾನ್ ಸಂತಾಪ

ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 261ಕ್ಕೆ ಏರಿದೆ. ರೈಲ್ವೆ ಇತಿಹಾಸದಲ್ಲಿಯೇ ಭೀಕರ ಅಪಘಾತಗಳಲ್ಲಿ ಒಂದಾದ ಈ ರೈಲು ಅಪಘಾತಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ. ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಸಂತಾಪ ಸೂಚಿಸಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ನವದೆಹಲಿ: ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 261ಕ್ಕೆ ಏರಿದೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ.

ಈವರೆಗೆ ಬಂದಿರುವ ಮಾಹಿತಿ ಪ್ರಕಾರ, 'ಅಪಘಾತದಲ್ಲಿ 238 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು 650 ಗಾಯಗೊಂಡ ಪ್ರಯಾಣಿಕರನ್ನು ಗೋಪಾಲ್‌ಪುರ, ಖಾಂತಪಾರಾ, ಬಾಲಸೋರ್, ಭದ್ರಕ್ ಮತ್ತು ಸೊರೊ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ' ಎಂದು ಆಗ್ನೇಯ ರೈಲ್ವೆ ತಿಳಿಸಿದೆ.

ರೈಲ್ವೆ ಇತಿಹಾಸದಲ್ಲಿಯೇ ಭೀಕರ ಅಪಘಾತಗಳಲ್ಲಿ ಒಂದಾದ ಈ ರೈಲು ಅಪಘಾತಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ. ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸುದ್ದಿ ಕೇಳಿ ದುಃಖವಾಯಿತು. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಇರುತ್ತವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ' ಎಂದು ಅವರು ಹೇಳಿದ್ದಾರೆ.

ಅಪಘಾತದ ಸುದ್ದಿಯನ್ನು ಕೇಳಿ ನಿಜವಾಗಿಯೂ ದುಃಖವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಈ ದುರದೃಷ್ಟಕರ ಅಪಘಾತದಿಂದ ಗಾಯಗೊಂಡ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com