ಐಐಎಸ್‌ಸಿ ಬೆಂಗಳೂರು, ಐಐಟಿ ಮದ್ರಾಸ್ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ: ವರದಿ

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿರುವ ಐಐಎಸ್ ಸಿ ಬೆಂಗಳೂರು ಮತ್ತು ತಮಿಳುನಾಡಿನ ಐಐಟಿ ಮದ್ರಾಸ್ ಶಿಕ್ಷಣ ಸಂಸ್ಥೆಗಳು ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಎಂದು ವರದಿಯೊಂದು ಹೇಳಿದೆ.
ಐಐಎಸ್ ಸಿ ಬೆಂಗಳೂರು
ಐಐಎಸ್ ಸಿ ಬೆಂಗಳೂರು
Updated on

ನವದೆಹಲಿ: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿರುವ ಐಐಎಸ್ ಸಿ ಬೆಂಗಳೂರು ಮತ್ತು ತಮಿಳುನಾಡಿನ ಐಐಟಿ ಮದ್ರಾಸ್ ಶಿಕ್ಷಣ ಸಂಸ್ಥೆಗಳು ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಎಂದು ವರದಿಯೊಂದು ಹೇಳಿದೆ.

ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಫ್ರೇಮ್‌ವರ್ಕ್‌ (NIRF) ಈ ಬಗ್ಗೆ ವರದಿ ನೀಡಿದ್ದು, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಐಐಟಿ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಎಂದು ಘೋಷಿಸಿದೆ.

ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ರ‍್ಯಾಂಕಿಂಗ್ ಪಟ್ಟಿಯಲ್ಲಿ ಐಐಎಸ್‌ಸಿ ತನ್ನ ಅಗ್ರ ಪಟ್ಟ ಕಾಯ್ದುಕೊಂಡಿದೆ. ನಂತರದ ಸ್ಥಾನದಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾ ನಂತರದ ಸ್ಥಾನಗಳನ್ನು ಪಡೆದಿವೆ.

ಕೊಲ್ಕತ್ತಾದ ಜಾಧವಪುರ ವಿಶ್ವವಿದ್ಯಾಲಯ, ವಾರಣಾಸಿಯ ಬನಾರಸ್ ಹಿಂದು ವಿಶ್ವವಿದ್ಯಾಲಯ, ಮಣಿಪಾಲದ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ, ಕೊಯಂಬತ್ತೂರಿನ ಅಮೃತಾ ವಿಶ್ವ ವಿದ್ಯಾಪೀಠಂ, ವೆಲ್ಲೂರಿನ ವೆಲ್ಲೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಅಲಿಘಡದ ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯ, ಹೈದರಾಬಾದ್‌ನ ಯೂನಿವರ್ಸಿಟಿ ಆಫ್ ಹೈದರಾಬಾದ್ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದುಕೊಂಡಿವೆ.

ಉಳಿದಂತೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮದ್ರಾಸ್ ಈ ವರ್ಷದ ಒಟ್ಟಾರೆ ವಿಭಾಗದ ಅಡಿಯಲ್ಲಿ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿದ್ದು, ನಂತರದ ಸ್ಥಾನದಲ್ಲಿ ಐಐಎಸ್‌ಸಿ ಬೆಂಗಳೂರು ಮತ್ತು ಐಐಟಿ-ದೆಹಲಿ ಇದೆ. ನಾಲ್ಕು ಮತ್ತು ಐದನೇ ಸ್ಥಾನವನ್ನು ಕ್ರಮವಾಗಿ ಐಐಟಿ ಬಾಂಬೆ ಮತ್ತು ಐಐಟಿ ಕಾನ್ಪುರ ಪಡೆದುಕೊಂಡಿವೆ.

"ಡಾ. ರಾಧಾಕೃಷ್ಣನ್ ಸಮಿತಿಯನ್ನು ಶಿಕ್ಷಣ ಸಚಿವಾಲಯವು ಮೌಲ್ಯಮಾಪನದ ಮಾನ್ಯತೆ ನಿಯತಾಂಕಗಳನ್ನು ಪರಿಶೀಲಿಸಲು ಸ್ಥಾಪಿಸಿತ್ತು. ಎಲ್ಲಾ ಶಿಕ್ಷಣ ಸಂಸ್ಥೆಗಳ ಡೇಟಾ ಬೆರಳ ತುದಿಯಲ್ಲಿ ಲಭ್ಯವಿರುತ್ತದೆ. ಒಂದು ರಾಷ್ಟ್ರ ಒಂದು ದತ್ತಾಂಶ ನಡೆಯುತ್ತಿದೆ” ಎಂದು ನ್ಯಾಷನಲ್ ಅಸೆಸ್‌ಮೆಂಟ್ ಅಂಡ್ ಅಕ್ರೆಡಿಟೇಶನ್ ಕೌನ್ಸಿಲ್ ಎಜುಕೇಶನಲ್ (NAAC) ನ ಅಧ್ಯಕ್ಷರಾದ. ಅನಿಲ್ ಸಹಸ್ರಬುದ್ಧೆ ಹೇಳಿದ್ದಾರೆ.

“ನಾವು NIRF ಅನ್ನು ನಾಲ್ಕು ವಿಭಾಗಗಳೊಂದಿಗೆ ಪ್ರಾರಂಭಿಸಿದ್ದೇವೆ. ಉನ್ನತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವುದು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ಇದರ ಉದ್ದೇಶವಾಗಿತ್ತು. 8 ನೇ ಆವೃತ್ತಿಯೊಂದಿಗೆ, ನಾವು ಈಗ 8 ವಿಷಯ-ನಿರ್ದಿಷ್ಟ ಶ್ರೇಯಾಂಕಗಳನ್ನು ಒಳಗೊಂಡಂತೆ 12 ವಿಭಾಗಗಳನ್ನು ಹೊಂದಿದ್ದೇವೆ ಎಂದು ಕಾರ್ಯದರ್ಶಿ ಅನಿಲ್ ಕುಮಾರ್ ನಸ್ಸಾ ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com