ಮುಂಬೈ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಊಟದ ಬಿಲ್ ಷೇರ್ ಮಾಡಿಕೊಳ್ಳುವ ವಿಚಾರಕ್ಕೆ 20 ವರ್ಷದ ಯುವಕನನ್ನು ಹತ್ಯೆ ಮಾಡಿದ ಆತನ ನಾಲ್ವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಇಬ್ಬರನ್ನು ಜೈಲಿಗೆ ಕಳುಹಿಸಲಾಗಿದೆ. ಇಬ್ಬರು ಅಪ್ರಾಪ್ತ ಆರೋಪಿಗಳಾಗಿದ್ದು, ಅವರನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮೇ 31 ರಂದುಹುಟ್ಟುಹಬ್ಬ ಆಚರಿಸಿಕೊಂಡ ಹತ್ಯೆಯಾದ ಯುವಕ, ಮುಂಬೈನ ಶಿವಾಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಂಡಿಯಲ್ಲಿರುವ ಧಾಬಾದಲ್ಲಿ ಅಂದು ರಾತ್ರಿ 8 ಗಂಟೆ ಸುಮಾರಿಗೆ ಸ್ನೇಹಿತರ ಜತೆ ಪಾರ್ಟಿ ಮಾಡಿದ್ದಾನೆ.
ಊಟದ ಬಿಲ್ ಸುಮಾರು 10,000 ರೂಪಾಯಿ ಆಗಿದ್ದು, ಅದನ್ನು ಹತ್ಯೆಯಾದ ಯುವಕ ಪಾವತಿಸಿದ್ದಾನೆ. ನಂತರ ಆತನಿಗೆ ಹಣ ಕೊಡುವುದಾಗಿ ಉಳಿದ ಸ್ನೇಹಿತರು ಒಪ್ಪಿಕೊಂಡಿದ್ದರು ಎನ್ನಲಾಗಿದೆ.
ಬಳಿಕ ಕೊಲೆಯಾದ ಯುವಕ ತನ್ನ ಸ್ನೇಹಿತರ ಬಳಿ ಹಣ ಕೇಳಿದಾಗ ಹಣ ಕೊಡಲು ನಿರಾಕರಿಸಿ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಾಲ್ವರು ಆರೋಪಿಗಳು ಹುಟ್ಟುಹಬ್ಬ ಆಚರಿಸಿಕೊಂಡ ಯುವಕನನ್ನು ಥಳಿಸಿ, ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಯುವಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಯುವಕ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
Advertisement