ಏರ್ ಇಂಡಿಯಾ
ಏರ್ ಇಂಡಿಯಾ

ಎಂಜಿನ್​​ನಲ್ಲಿ ತಾಂತ್ರಿಕ ದೋಷ: ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ರಷ್ಯಾಗೆ ಡೈವರ್ಟ್

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ​​​ಏರ್ ಇಂಡಿಯಾ ವಿಮಾನದ ಎಂಜಿನ್​​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಿಮಾನವನ್ನು ರಷ್ಯಾದ ಮಗದನ್‌ಗೆ ಡೈವರ್ಟ್ ಮಾಡಲಾಗಿದೆ. 

ನವದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ​​​ಏರ್ ಇಂಡಿಯಾ ವಿಮಾನದ ಎಂಜಿನ್​​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಿಮಾನವನ್ನು ರಷ್ಯಾದ ಮಗದನ್‌ಗೆ ಡೈವರ್ಟ್ ಮಾಡಲಾಗಿದೆ. 

216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.

"ಜೂನ್ 6 ರ AI173, ದೆಹಲಿ-ಸ್ಯಾನ್ ಫ್ರಾನ್ಸಿಸ್ಕೋ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ಹೊತ್ತ ವಿಮಾನವನ್ನು ಬೇರೆಡೆಗೆ ತಿರುಗಿಸಲಾಯಿತು ಮತ್ತು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ" ಎಂದು ಏರ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿಮಾನ ಕಡ್ಡಾಯ ತಪಾಸಣೆಗೆ ಒಳಗಾಗುತ್ತಿದೆ. ಪ್ರಯಾಣಿಕರು ತಮ್ಮ ಗಮ್ಯಸ್ಥಾನವನ್ನು ಬೇಗನೆ ತಲುಪಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com