‘ಬಾಂಬ್’ ಕುರಿತು ವಿಮಾನದಲ್ಲಿ ಚರ್ಚೆ: ದೆಹಲಿ ವಿಮಾನ ನಿಲ್ದಾಣದಲ್ಲಿ ಓರ್ವನ ಬಂಧನ

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬಾಂಬ್ ಬೆದರಿಕೆ’ಯ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನನ್ನು ಬಂಧನಕ್ಕೊಳಪಡಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬಾಂಬ್ ಬೆದರಿಕೆ’ಯ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನನ್ನು ಬಂಧನಕ್ಕೊಳಪಡಿಸಲಾಗಿದೆ.

ಬಂಧಿತ ವ್ಯಕ್ತಿಯನ್ನು ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಜೀಂ ಖಾನ್ ಎಂದು ಗುರುತಿಸಲಾಗಿದೆ. ಜೂನ್ 7 ರಂದು ವಿಸ್ತಾರಾ ವಿಮಾನ ಸಂಖ್ಯೆ ಯುಕೆ-941 ರಲ್ಲಿ ದೆಹಲಿಯಿಂದ ಮುಂಬೈಗೆ ಸಂಪರ್ಕ ವಿಮಾನದಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದ.

ಪ್ರಯಾಣದ ವೇಳೆ ದೂರವಾಣಿ ಸಂಭಾಷಣೆಯ ವೇಳೆ ‘ಬಾಂಬ್’ ಬಗ್ಗೆ ಮಾತನಾಡಿದ್ದು, ಇದನ್ನು ಸಹ ಪ್ರಯಾಣಿಕರಾಗಿದ್ದ ಮಹಿಳೆಯೊಬ್ಬರು ಕೇಳಿಸಿಕೊಂಡಿದ್ದಾರೆ. ಕೂಡಲೇ ವಿಮಾನದಲ್ಲಿದ್ದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ, ಸಿಬ್ಬಂದಿಗಳು ವ್ಯಕ್ತಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಹಸ್ತಾಂತರಿಸಿದ್ದಾರೆ. ನಂತರ ದೆಹಲಿ ಪೊಲೀಸರು ಆತನನ್ನು ಬಂಧನಕ್ಕೊಳಪಡಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com