ಸೋನಿಪತ್: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್‌ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಭಾಗವಾಗಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್, ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ "ಸಮಸ್ಯೆಗಳು ಪರಿಹಾರವಾದ ನಂತರವೇ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಾರೆ" ಎಂದು ಶನಿವಾರ ಹೇಳಿದ್ದಾರೆ.
"ನಮ್ಮ ಈ ಎಲ್ಲಾ ಸಮಸ್ಯೆಗಳು ಪರಿಹಾರವಾದ ನಂತರವೇ ನಾವು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇವೆ. ನಾವು ಪ್ರತಿದಿನ ಮಾನಸಿಕವಾಗಿ ಏನನ್ನು ಅನುಭವಿಸುತ್ತಿದ್ದೇವೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ" ಎಂದು ಹರಿಯಾಣದ ಸೋನಿಪತ್‌ನಲ್ಲಿ ಇಂದು ನಡೆದ ಮಹಾಪಂಚಾಯತ್‌ನಲ್ಲಿ ಸಾಕ್ಷಿ ಮಲಿಕ್ ಹೇಳಿದ್ದಾರೆ.
ಏಷ್ಯನ್ ಗೇಮ್ಸ್ 2023, ಸೆಪ್ಟೆಂಬರ್‌ನಲ್ಲಿ ಚೀನಾದಲ್ಲಿ ನಡೆಯಲಿದೆ. ಆದರೆ ಕುಸ್ತಿಪಟುಗಳು ಈ ಪಂದ್ಯಾವಳಿಯಿಂದ ಹಿಂದೆ ಸರಿದರೆ ಭಾರತದ ಮೇಲೆ ಹೆಚ್ಚು ಪರಿಣಾಮ ಬೀರಬಹುದು. ಏಕೆಂದರೆ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರು ಕಳೆದ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
"ನಾವು ಸರ್ಕಾರದೊಂದಿಗೆ ಯಾವುದೇ ಮಾತುಕತೆ ನಡೆಸಿದ್ದರೂ, ಅದನ್ನು ನಾವು ಬೆಂಬಲಿಸುವ ಮತ್ತು ನಮ್ಮೊಂದಿಗೆ ನಿಂತಿರುವ ಜನರೊಂದಿಗೆ ಚರ್ಚಿಸುತ್ತೇವೆ..." ಎಂದು ಇಂದು ಬೆಳಗ್ಗೆ, ಒಲಿಂಪಿಯನ್ ಬಜರಂಗ್ ಪುನಿಯಾ ಅವರು ಹೇಳಿದ್ದಾರೆ.
Advertisement