ಸಹಜ ಸ್ಥಿತಿಯತ್ತ ಮಣಿಪುರ: 50,000ಕ್ಕೂ ಹೆಚ್ಚು ಮಂದಿ ಇನ್ನೂ ಪರಿಹಾರ ಶಿಬಿರಗಳಲ್ಲೇ ವಾಸ!

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ಸ್ಥಳಾಂತರಗೊಂಡ 50,000ಕ್ಕೂ ಹೆಚ್ಚು ಜನರು ಪ್ರಸ್ತುತ ರಾಜ್ಯಾದ್ಯಂತ 349 ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on: 

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ಸ್ಥಳಾಂತರಗೊಂಡ 50,000ಕ್ಕೂ ಹೆಚ್ಚು ಜನರು ಪ್ರಸ್ತುತ ರಾಜ್ಯಾದ್ಯಂತ 349 ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. 

ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವರು ಎಲ್ಲ ಜಿಲ್ಲೆಗಳಲ್ಲಿ ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ರಂಜನ್ ಭಾನುವಾರ ಹೇಳಿದ್ದಾರೆ. ಕಾರ್ಯಾಚರಣೆ ವೇಳೆ 53 ಶಸ್ತ್ರಾಸ್ತ್ರಗಳು ಮತ್ತು 39 ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ರಂಜನ್ ರಾಜ್ಯ ಸರ್ಕಾರದ ವಕ್ತಾರರೂ ಆಗಿದ್ದು ಜಾತಿ ಸಂಘರ್ಷದಿಂದ ನೊಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಶೀಘ್ರವೇ ಸಾರ್ವಜನಿಕಗೊಳಿಸಲಾಗುವುದು ಎಂದರು. 'ಜನಾಂಗೀಯ ಹಿಂಸಾಚಾರದಿಂದ ಸ್ಥಳಾಂತರಗೊಂಡ ಒಟ್ಟು 50,698 ಜನರು ಪ್ರಸ್ತುತ 349 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿ ಸಚಿವರು ಹೇಳಿದ್ದಾರೆ.

ವಿಶೇಷವಾಗಿ ಮಹಿಳೆಯರು, ವೃದ್ಧರು ಮತ್ತು ಮಕ್ಕಳಿಗಾಗಿ ತೆರೆಯಲಾದ ಪರಿಹಾರ ಕೇಂದ್ರಗಳ ಮೇಲ್ವಿಚಾರಣೆಗೆ ಜಿಲ್ಲಾ ಮತ್ತು ಕ್ಲಸ್ಟರ್ ನೋಡಲ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯಲು ಬೆಲೆ ನಿಯಂತ್ರಣ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದರು. ರಾಷ್ಟ್ರೀಯ ಹೆದ್ದಾರಿ (NH)-37 ಮೂಲಕ ರಾಜ್ಯಕ್ಕೆ ವಿವಿಧ ಸರಕುಗಳನ್ನು ತರಲಾಗುತ್ತಿದೆ ಎಂದು ಹೇಳಿದರು.
     
ಮೇ ಆರಂಭದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ, 35,000 ಮೆಟ್ರಿಕ್ ಟನ್ ನಿರ್ಮಾಣ ಸಾಮಗ್ರಿಗಳು, ಇಂಧನ ಮತ್ತು ಅಗತ್ಯ ವಸ್ತುಗಳನ್ನು 2,376 ಟ್ರಕ್‌ಗಳಲ್ಲಿ ಮಣಿಪುರಕ್ಕೆ ತರಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಅಸ್ತಿತ್ವದಲ್ಲಿರುವ 242 ಬ್ಯಾಂಕ್ ಶಾಖೆಗಳಲ್ಲಿ ಒಟ್ಟು 198 ಈಗ ಕಾರ್ಯನಿರ್ವಹಿಸುತ್ತಿವೆ ಮತ್ತು ಉಳಿದವುಗಳು ಶೀಘ್ರದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ರಂಜನ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com