ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ ಪಂಜಾಬ್ ಸರ್ಕಾರ!

ನಗದು ಕೊರತೆಯಿಂದ ಬಳಲುತ್ತಿರುವ ಪಂಜಾಬ್ ಸರ್ಕಾರವು ಭಾನುವಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 92 ಪೈಸೆ ಮತ್ತು ಡೀಸೆಲ್ ಬೆಲೆಯನ್ನು 88 ಪೈಸೆ ಹೆಚ್ಚಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಂಡೀಗಢ: ನಗದು ಕೊರತೆಯಿಂದ ಬಳಲುತ್ತಿರುವ ಪಂಜಾಬ್ ಸರ್ಕಾರವು ಭಾನುವಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 92 ಪೈಸೆ ಮತ್ತು ಡೀಸೆಲ್ ಬೆಲೆಯನ್ನು 88 ಪೈಸೆ ಹೆಚ್ಚಿಸಿದೆ.

ಈ ಮೂಲಕ ಈ ವರ್ಷ ಎರಡನೇ ಬಾರಿಗೆ ಬೆಲೆ ಏರಿಕೆಯಾದಂತಾಗಿದೆ.

ರಾಜ್ಯದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಈಗ 98.65 ರೂ. ಆಗಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 88.95 ರೂ. ಆಗಲಿದೆ.

ಬೆಲೆ ಏರಿಕೆಯಿಂದ ರಾಜ್ಯಕ್ಕೆ ವಾರ್ಷಿಕ 600 ಕೋಟಿ ಆದಾಯ ಬರುವ ಗುರಿ ಹೊಂದಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಲೆ ಏರಿಕೆಯ ಹೊರತಾಗಿಯೂ, ಪಂಜಾಬ್‌ನಲ್ಲಿ ಡೀಸೆಲ್ ನೆರೆಯ ಹರಿಯಾಣಕ್ಕಿಂತ ಅಗ್ಗವಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ಎರಡೂ ರಾಜಸ್ಥಾನಕ್ಕಿಂತ ಅಗ್ಗವಾಗಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com