ಮಧ್ಯಪ್ರದೇಶ: ಪತಿಯಿಂದ ವಿಚ್ಚದನ ಕೋರಿ 6 ಕೋಟಿ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟ ಪತ್ನಿ, ಪ್ರಕರಣ ದಾಖಲು

ದೂರವಾದ ಪತಿಯಿಂದ ವಿಚ್ಛೇದನ ಕೋರಿ 6 ಕೋಟಿ ಜೀವನಾಂಶ ನೀಡುವಂತೆ ಬೇಡಿಕೆ ಇಟ್ಟಿದ್ದ ಮಹಿಳೆಯ ವಿರುದ್ಧ ಮಧ್ಯಪ್ರದೇಶ ಪೊಲೀಸರು ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭೋಪಾಲ್: ದೂರವಾದ ಪತಿಯಿಂದ ವಿಚ್ಛೇದನ ಕೋರಿ 6 ಕೋಟಿ ಜೀವನಾಂಶ ನೀಡುವಂತೆ ಬೇಡಿಕೆ ಇಟ್ಟಿದ್ದ ಮಹಿಳೆಯ ವಿರುದ್ಧ ಮಧ್ಯಪ್ರದೇಶ ಪೊಲೀಸರು ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.

ಲಲಿತ್‌ಪುರದಲ್ಲಿ ವಾಸಿಸುವ ತಮ್ಮ ಪತ್ನಿ 6 ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಭನ್ವಾರ್ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ರಾಮ್ ರಜಪೂತ್ ಅವರು  ದೂರು ದಾಖಲಿಸಿದ್ದಾರೆ ಎಂದು ಭನ್ವಾರ್ಕುವಾ ಪೊಲೀಸ್ ಠಾಣೆಯ ಡಿಸಿಪಿ ರಾಜೇಶ್ ಸಿಂಗ್ ತಿಳಿಸಿದ್ದಾರೆ. 

"ಇಬ್ಬರ ನಡುವೆ ವಿಚ್ಛೇದನ ಪ್ರಕರಣ ನಡೆಯುತ್ತಿದೆ. ದೂರಿನ ಆಧಾರದ ಮೇಲೆ ಪತ್ನಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384, 507 ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com