ಬಿಪರ್ಜೋಯ್ ಚಂಡಮಾರುತ: ಗುಜರಾತ್, ಮುಂಬೈನಲ್ಲಿ ಹೈ ಅಲರ್ಟ್; ಸೌರಾಷ್ಟ್ರ, ಕಚ್ ನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ IMD

ಬಿಪರ್‌ಜೋಯ್ ಚಂಡಮಾರುತ "ಅತ್ಯಂತ ತೀವ್ರ' ಸ್ವರೂಪಕ್ಕೆ ತಿರುಗಿದ್ದು, ಗುಜರಾತ್, ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಿಪರ್ಜೋಯ್ ಚಂಡಮಾರುತ
ಬಿಪರ್ಜೋಯ್ ಚಂಡಮಾರುತ

ನವದೆಹಲಿ: ಬಿಪರ್‌ಜೋಯ್ ಚಂಡಮಾರುತ "ಅತ್ಯಂತ ತೀವ್ರ' ಸ್ವರೂಪಕ್ಕೆ ತಿರುಗಿದ್ದು, ಗುಜರಾತ್, ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಿಪರ್ಜಾಯ್ ಚಂಡಮಾರುತವು "ಕ್ಷಿಪ್ರ ಅತ್ಯಂತ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಪರಿಣಾಮ ಸೌರಾಷ್ಟ್ರ ಮತ್ತು ಗುಜರಾತ್ ನ ಕಚ್ ನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಗುಜರಾತ್‌ನ ಕಚ್ ಮತ್ತು ಪಾಕಿಸ್ತಾನದ ಕರಾಚಿ ನಡುವೆ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಕರಾವಳಿಯಲ್ಲಿ ಹವಾಮಾನ ಇಲಾಖೆ ಚಂಡಮಾರುತದ ಎಚ್ಚರಿಕೆ ನೀಡಿದೆ. 

"ಸೌರಾಷ್ಟ್ರ ಮತ್ತು ಕಚ್ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಸಮುದ್ರದ ಪರಿಸ್ಥಿತಿಯು ಬುಧವಾರದವರೆಗೆ ತುಂಬಾ ಒರಟಾಗಿರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ತಮ್ಮ ತಮ್ಮ ದೋಣಿಗಳನ್ನು ಎತ್ತರದ ಪ್ರದೇಶದಲ್ಲಿ ಇರಿಸುವಂತೆ ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.  "ಕಚ್, ಜಾಮ್‌ನಗರ, ಮೊರ್ಬಿ, ಗಿರ್ ಸೋಮನಾಥ್, ಪೋರಬಂದರ್ ಮತ್ತು ದೇವಭೂಮಿ ದ್ವಾರಕಾ ಜಿಲ್ಲೆಗಳು ಜೂನ್ 13-15 ರ ಅವಧಿಯಲ್ಲಿ ಭಾರೀ ಮಳೆ ಮತ್ತು ಅತಿ ಹೆಚ್ಚು ಗಾಳಿಯ ವೇಗದೊಂದಿಗೆ ಚಂಡಮಾರುತದಿಂದ ಪ್ರಭಾವಿತವಾಗಿರುತ್ತದೆ, ಚಂಡಮಾರುತವು ಗಂಟೆಗೆ 150 ಕಿಮೀ ವೇಗದಲ್ಲಿ ಚಲಿಸಬಹುದು" ಎಂದು ಹೇಳಿದೆ.

ಕಚ್ ಜಿಲ್ಲೆಯ ಅಧಿಕಾರಿಗಳು ತಗ್ಗು ಪ್ರದೇಶಗಳಿಂದ ಜನರನ್ನು ತಾತ್ಕಾಲಿಕ ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಕರಾವಳಿ ಜಿಲ್ಲೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭಾನುವಾರ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇನ್ನು ಅರೇಬಿಯನ್ ಸಮುದ್ರದ ಕರಾವಳಿಯಲ್ಲಿರುವ ಗುಜರಾತ್‌ನ ವಲ್ಸಾದ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣವಾದ ತಿಥಾಲ್ ಬೀಚ್ ಅನ್ನು ಎತ್ತರದ ಅಲೆಗಳ ಕಾರಣ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಗುಜರಾತ್, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪ ಕರಾವಳಿಯ ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಐಎಂಡಿ ಸೂಚಿಸಿದೆ. "ರಾಜ್ಯ ಸರ್ಕಾರಗಳು ನಿಕಟವಾಗಿ ನಿಗಾ ಇಡಲು ಸೂಚಿಸಲಾಗಿದೆ, ನಿಯಮಿತವಾಗಿ ತಮ್ಮ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಅದಕ್ಕೆ ಅನುಗುಣವಾಗಿ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಅಂತರರಾಷ್ಟ್ರೀಯ ಕಡಲ ಕಾನೂನಿಗೆ ಅನುಸಾರವಾಗಿ, ಮುಂಬರುವ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಬಗ್ಗೆ ಹಡಗುಗಳನ್ನು ಎಚ್ಚರಿಸಲು ಬಂದರುಗಳು ಸಂಕೇತಗಳನ್ನು ಹಾರಿಸಬೇಕಾಗುತ್ತದೆ. ಕಡಲ ಚಟುವಟಿಕೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹಡಗುಗಳು ಮತ್ತು ಅವರ ಸಿಬ್ಬಂದಿಯನ್ನು ರಕ್ಷಿಸಲು ಇದನ್ನು ಮಾಡಲಾಗುತ್ತದೆ. ಬಿಪರ್‌ಜೋಯ್ ಚಂಡಮಾರುತ ಅರಬ್ಬಿ ಸಮುದ್ರದ ಮೇಲೆ ಬೀಸುತ್ತಿರುವ ಹವಾಮಾನ ವೈಪರೀತ್ಯದಿಂದಾಗಿ ನಿನ್ನೆ ಸಂಜೆ ಮುಂಬೈನಲ್ಲಿ ವಿಮಾನ ಕಾರ್ಯಾಚರಣೆಗೆ ತೊಂದರೆಯಾಯಿತು. ಹವಾಮಾನದ ಕಾರಣದಿಂದ ಹಲವಾರು ವಿಮಾನಗಳು ರದ್ದುಗೊಂಡವು ಅಥವಾ ವಿಳಂಬಗೊಂಡವು, ಕೆಲ ವಿಮಾನಗಳ ಲ್ಯಾಂಡಿಂಗ್ ಅನ್ನು ಸ್ಥಗಿತಗೊಳಿಸಲಾಯಿತು. 

ಇತ್ತ ಸಿಂಧ್ ಮತ್ತು ಬಲೂಚಿಸ್ತಾನದ ಅಧಿಕಾರಿಗಳಿಗೆ ಎಚ್ಚರಿಕೆ ವಹಿಸುವಂತೆ ಪಾಕಿಸ್ತಾನ ಸರ್ಕಾರ ಸೂಚಿಸಿದೆ. ಜೂನ್ 13 ರ ರಾತ್ರಿಯಿಂದ ಸಿಂಧ್ ಮತ್ತು ಮಕ್ರಾನ್ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಪಾಕಿಸ್ತಾನದ ಹವಾಮಾನ ಇಲಾಖೆ (PMD) ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com