ದೇಶ

ಮುಂಬೈ: ಧಾರಾವಿಯಲ್ಲಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ, ನವಜಾತ ಶಿಶು ಸೇರಿ 32 ಮಂದಿಗೆ ಗಾಯ

ಮುಂಬೈ: ಧಾರಾವಿಯಲ್ಲಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ, ನವಜಾತ ಶಿಶು ಸೇರಿ 32 ಮಂದಿಗೆ ಗಾಯ
ಸಂಗ್ರಹ ಚಿತ್ರ
Published On :

ಮುಂಬೈ: ಮುಂಬೈನ ಧಾರಾವಿ ಕೊಳೆಗೇರಿ ಪ್ರದೇಶದಲ್ಲಿನ ಏಳು ಅಂತಸ್ತಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ನವಜಾತ ಶಿಶು ಸೇರಿದಂತೆ 32 ಜನರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ 90 ಫೀಟ್ ರಸ್ತೆಯಲ್ಲಿರುವ ಶಾಮಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಭದ್ರತಾ ಪಡೆಗಳು 7-80 ಜನರನ್ನು ರಕ್ಷಣೆ ಮಾಡಿತು. ಮಧ್ಯಾಹ್ನ 12.30ರ ಸುಮಾರಿಗೆ ಬೆಂಕಿಯ ಕೆನ್ನಾಲಿಗೆ ನಿಯಂತ್ರಣಕ್ಕೆ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾಮನ್ ಪ್ಯಾಸೇಜ್ ಪ್ರದೇಶದಲ್ಲಿ ಎಲೆಕ್ಟ್ರಿಕ್ ವೈರಿಂಗ್ ನಿಂದಾಗಿ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 5 ಮತ್ತು 7ನೇ ಮಹಡಿಯಯಲ್ಲಿ ಕೆಲವು ಸ್ಕ್ರ್ಯಾಪ್ ವಸ್ತುಗಳನ್ನು ಇರಿಸಿದ್ದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಇತರೆ ಮಹಡಿಗಳಿಗೂ ಹರಡಿದೆ.

ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು.

ಘಟನೆಯಲ್ಲಿ ಒಟ್ಟು 32 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ 1 ನವಜಾತ ಶಿಶು ಕೂಡ ಇದೆ ಎಂದು ತಿಳಿಸಿದ್ದಾರೆ.

ಇಬ್ಬರು ಹಿರಿಯ ನಾಗರಿಕರನ್ನು ಸಯಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಇತರರನ್ನು ಆಯುಷ್ ಆಸ್ಪತ್ರೆ ದಾಖಲಿಸಲಾಗಿದೆ. ಘಟನೆಯಲ್ಲಿ ಸಾವುಗಳು ವರದಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.