
ಕಟಕ್: ಒಡಿಶಾ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದು, ಇದರೊಂದಿಗೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 289 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಯಾಣಿಕನನ್ನು ಬಿಹಾರ ನಿವಾಸಿ ಬಿಜಯ್ ಪಾಸ್ವಾನ್ ಎಂದು ಗುರುತಿಸಲಾಗಿದ್ದು, ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ ಜೂನ್ 2 ರಂದು ಅಪಘಾತ ಸಂಭವಿಸಿದ ಒಂದು ದಿನದ ನಂತರ ಜೂನ್ 3 ರಂದು ಪಾಸ್ವಾನ್ ಅವರನ್ನು ಕಟಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪಾಸ್ವಾನ್ ಅವರು ಬೆನ್ನುಹುರಿ ಸೇರಿದಂತೆ ಹಲವು ಗಾಯಗಳಿಂದ ಬಳಲುತ್ತಿದ್ದರು. ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ರಾತ್ರಿ ಪಾಸ್ವಾನ್ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತು ಮತ್ತು ಮಂಗಳವಾರ ಮೃತಪಟ್ಟಿದ್ದಾರೆ ಎಂದು ಮೃತರ ಸಹೋದರ ತಿಳಿಸಿದ್ದಾರೆ.
Advertisement