ದೇಶ

ಯುಪಿಯಲ್ಲಿ ಅಕ್ರಮ ಪಟಾಕಿ ಗೋಡೌನ್‌ಗೆ ಬೆಂಕಿ: ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ದುರ್ಮರಣ

ಯುಪಿಯಲ್ಲಿ ಅಕ್ರಮ ಪಟಾಕಿ ಗೋಡೌನ್‌ಗೆ ಬೆಂಕಿ: ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಸಂಭಾಲ್: ಅಕ್ರಮ ಪಟಾಕಿ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುನ್ನಾರ್ ಟೌನ್‌ಶಿಪ್‌ನಲ್ಲಿ ಸಂಜೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಗುಡ್ಡೋ (40), ಆನಂ (25), ಸುಮಯ್ಯ (12) ಮತ್ತು ಅಪರಿಚಿತ ಅಪ್ರಾಪ್ತರೊಬ್ಬರು ಮೃತಪಟ್ಟಿದ್ದಾರೆ. ಇನ್ನು 8 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ಅವರು ಸರಾಯ್ ಪ್ರದೇಶದ ಸಬೀರ್ ಅಲಿ ಅವರ ಪಟಾಕಿ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಫೋಟದಿಂದಾಗಿ ಮೂವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ ಎಂದು ಸಮುದಾಯ ಆರೋಗ್ಯ ಕೇಂದ್ರ ಗುನ್ನೌರ್‌ನ ಪ್ರಭಾರಿ ಹೇಳಿದ್ದಾರೆ.

ಅಲಿ ಎಂಬಾತ ಅನುಮತಿ ಪಡೆದ ಸ್ಥಳವನ್ನು ಹೊರತುಪಡಿಸಿ ವಸತಿ ಪ್ರದೇಶದಲ್ಲಿ ಪಟಾಕಿಗಳನ್ನು ಸಂಗ್ರಹಿಸಿದ್ದಾರೆ ಎಂದು ಎಸ್ಪಿ ಚಕ್ರೇಶ್ ಮಿಶ್ರಾ ಹೇಳಿದ್ದಾರೆ.

ಘಟನೆ ನಂತರ ಅಲಿಯನ್ನು ಬಂಧಿಸಲಾಗಿದೆ. ಬೆಂಕಿಯನ್ನು ನಂದಿಸಲಾಗಿದೆ ಆದರೆ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಮಿಶ್ರಾ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.