ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: ಮೂವರಿಗೆ ಗುಂಡಿಕ್ಕಿ ಹತ್ಯೆ

ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದಿದ್ದು, ಪಶ್ಚಿಮ ಬಂಗಾಳದ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಮತ್ತು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೋಲ್ಕತ್ತಾ: ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದಿದ್ದು, ಪಶ್ಚಿಮ ಬಂಗಾಳದ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯ ಭಂಗೋರ್‌ನಲ್ಲಿ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದರೆ, ಉತ್ತರ ದಿನಜ್‌ಪುರ ಜಿಲ್ಲೆಯ ಚೋಪ್ರಾದಲ್ಲಿ ದುಷ್ಕರ್ಮಿಗಳು ಮತ್ತೊಬ್ಬ ಯುವಕನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು.

ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ತಡೆಯುತ್ತಿದ್ದು, ಹಿಂಸಾಚಾರ ನಡೆಸಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಆದರೆ ಬುಧವಾರದವರೆಗೆ ಆಡಳಿತ ಪಕ್ಷದ ಅಭ್ಯರ್ಥಿಗಳಿಗಿಂತ ಹೆಚ್ಚು ವಿರೋಧ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com