ಹೃದಯ ಶಸ್ತ್ರಚಿಕಿತ್ಸೆಗಾಗಿ ಕಾವೇರಿ ಆಸ್ಪತ್ರೆಗೆ ಸೆಂಥಿಲ್ ಬಾಲಾಜಿ ಸ್ಥಳಾಂತರಕ್ಕೆ ಮದ್ರಾಸ್ ಹೈಕೋರ್ಟ್ ಒಪ್ಪಿಗೆ

ತಮಿಳುನಾಡಿನ ಇಂಧನ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ನ್ಯಾಯಾಂಗ ಬಂಧನದಡಿ ಹೃದಯ ಶಸ್ತ್ರಚಿಕಿತ್ಸೆಗಾಗಿ ಕಾವೇರಿ ಆಸ್ಪತ್ರೆಗೆ ಸ್ಥಳಾಂತರಿಸಲು ಮದ್ರಾಸ್ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.
ಮದ್ರಾಸ್ ಹೈಕೋರ್ಟ್
ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡಿನ ಇಂಧನ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ನ್ಯಾಯಾಂಗ ಬಂಧನದಡಿ ಹೃದಯ ಶಸ್ತ್ರಚಿಕಿತ್ಸೆಗಾಗಿ ಕಾವೇರಿ ಆಸ್ಪತ್ರೆಗೆ ಸ್ಥಳಾಂತರಿಸಲು ಮದ್ರಾಸ್ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

ಓಮಂದೂರಾರ್ ಮಲ್ಟಿ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆ ಮತ್ತು ಇಎಸ್‌ಐ ಆಸ್ಪತ್ರೆಯ ವೈದ್ಯಕೀಯ ತಂಡವು ಒದಗಿಸಿದ ವೈದ್ಯಕೀಯ ವರದಿಯನ್ನು ಆಧರಿಸಿ ಸೆಂಥಿಲ್ ಬಾಲಾಜಿ ಅವರ ಪತ್ನಿ ಮೇಘಲಾ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ಮೇರೆಗೆ ನ್ಯಾಯಮೂರ್ತಿಗಳಾದ ಜೆ ನಿಶಾ ಬಾನು ಮತ್ತು ಡಿ ಭರತ ಚಕ್ರವರ್ತಿ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸೆಂಥಿಲ್‌ಗೆ ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.

ಸಚಿವರು ಈಗಾಗಲೇ ಖಾಸಗಿ ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಪೀಠವು ಗಮನಿಸಿದೆ.

ಇಎಸ್‌ಐ ಆಸ್ಪತ್ರೆಯ ತಂಡವು ಬುಧವಾರ ಅವರನ್ನು ಪರೀಕ್ಷಿಸಿದ ನಂತರ ತನ್ನ ಭಿನ್ನ ಅಭಿಪ್ರಾಯ ಹೊಂದಿದ್ದು, ಜಾರಿ ನಿರ್ದೇಶನಾಲಯ (ಇ.ಡಿ) ಅವರ ಆರೋಗ್ಯ ಸ್ಥಿತಿಯ ಬಗ್ಗೆ ನ್ಯಾಯಯುತ ವರದಿಯ ಬಗ್ಗೆ ದೆಹಲಿಯ ಏಮ್ಸ್‌ ವೈದ್ಯರ ಸ್ವತಂತ್ರ ತಂಡದಿಂದ ಪಡೆಯಲಾಗುವುದು ಎಂದು ಹೇಳಿದೆ. 

ಇ.ಡಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಆರ್‌ಎಲ್ ಸುಂದರೇಶನ್, ಸೆಂಥಿಲ್ ಬಾಲಾಜಿಯನ್ನು ಬಂಧಿಸುವ ಮೊದಲು ಸಾಮಾನ್ಯ ತಪಾಸಣೆ ನಡೆಸಿದಾಗ ಅವರ ಸ್ಥಿತಿ ಉತ್ತಮವಾಗಿತ್ತು. ನಂತರ ಅವರು ಎದೆ ನೋವಿನ ಬಗ್ಗೆ ದೂರು ನೀಡಿದಾಗ ಹೆಚ್ಚಿನ ಪರೀಕ್ಷೆಗೆ ಕಾರಣವಾಯಿತು ಎಂದು ತಿಳಿಸಿದ್ದಾರೆ.

ತಮಿಳುನಾಡಿನ ಸಿಎಂ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ಸಚಿವರಾಗಿರುವ ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಜಯಲಲಿತಾ ಸಂಪುಟದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 14ರಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಅವರನ್ನು ಬಂಧಿಸಿದ್ದರು. 

ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವ ಬದಲು, ಆಸ್ಪತ್ರೆಯ ವೈದ್ಯರು ಓಮಂದೂರರ್ ಮಲ್ಟಿ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆಗೆ ಭೇಟಿ ದಾಖಲಿಸಬಹುದು ಮತ್ತು ಚಿಕಿತ್ಸೆ ನೀಡಲು ಅವಕಾಶ ನೀಡಬಹುದು ಎಂದು ಅವರು ಒತ್ತಾಯಿಸಿದರು.

ಪೀಠದ ಪ್ರಶ್ನೆಗಳಿಗೆ ಉತ್ತರಿಸಿದ ಸುಂದರೇಶನ್, ಜಯಲಲಿತಾ ಸಂಪುಟದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಚೆನ್ನೈ ನಗರ ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ನಂತರ 2021ರಲ್ಲಿ ಇ.ಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಸೆಂಥಿಲ್ ಬಾಲಾಜಿ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್‌ಆರ್‌ ಇಳಾಂಗೋ, ಸಚಿವರಿಗೆ ಹೃದಯದ ಬೈಪಾಸ್‌ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಅವರ ಹೃದಯದಲ್ಲಿ ಮೂರು ಬ್ಲಾಕ್‌ಗಳು ಪತ್ತೆಯಾಗಿವೆ. ಹೀಗಾಗಿ, ನ್ಯಾಯಾಂಗ ಬಂಧನದಲ್ಲಿ ಶಸ್ತ್ರ ಚಿಕಿತ್ಸೆಗಾಗಿ ಅವರನ್ನು ಕಾವೇರಿ ಆಸ್ಪತ್ರೆಗೆ ಸ್ಥಳಾಂತರಿಸಲು ನ್ಯಾಯಾಲಯ ಅನುಮತಿ ನೀಡಬೇಕು ಎಂದು ಪ್ರಾರ್ಥಿಸಿದರು.

ಇ.ಡಿಯಿಂದ ಬಂಧನಕ್ಕೊಳಗಾಗಿದ್ದ ವ್ಯಕ್ತಿಯು ತನ್ನ ಸ್ವಂತ ಖರ್ಚಿನಲ್ಲಿ ತನ್ನಾಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಎಳಾಂಗೋ ಉಲ್ಲೇಖಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com