ನೆಹರು ಸ್ಮಾರಕ ಮ್ಯೂಸಿಯಂಗೆ ಮರು ನಾಮಕರಣ: ಮೋದಿಯ ಸಣ್ಣತನ, ಪ್ರತೀಕಾರವಾಗಿದೆ- ಕಾಂಗ್ರೆಸ್ ಟೀಕೆ

ರಾಷ್ಟ್ರ ರಾಜಧಾನಿಯ ತೀನ್ ಮೂರ್ತಿ ಭವನದ ಆವರಣದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಿರುವುದಕ್ಕೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. 
ನೆಹರು ಸ್ಮಾರಕ ಮ್ಯೂಸಿಯಂ
ನೆಹರು ಸ್ಮಾರಕ ಮ್ಯೂಸಿಯಂ

ನವದೆಹಲಿ: ರಾಷ್ಟ್ರ ರಾಜಧಾನಿಯ ತೀನ್ ಮೂರ್ತಿ ಭವನದ ಆವರಣದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಿರುವುದಕ್ಕೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. 

ತೀನ್ ಮೂರ್ತಿ ಭವನವು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಧಿಕೃತ ನಿವಾಸವಾಗಿತ್ತು. ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯ ವಿಶೇಷ ಸಭೆಯಲ್ಲಿ ಅದರ ಹೆಸರನ್ನು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಶುಕ್ರವಾರ ತಿಳಿಸಿದೆ.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಉಪಾಧ್ಯಕ್ಷರಾಗಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮರುನಾಮಕರಣ ನಿರ್ಧಾರವನ್ನು ಸ್ವಾಗತಿಸಿರುವುದಾಗಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಆದರೆ, ಈ ನಿರ್ಧಾರವನ್ನು ಕಾಂಗ್ರೆಸ್ ಹಿರಿಯ ಮುಖಂಡ ಜೈರಾಮ್ ರಮೇಶ್ ಟೀಕಿಸಿದ್ದಾರೆ.

ಇದು ಸಣ್ಣತನ ಮತ್ತು ಪ್ರತೀಕಾರವಾಗಿದೆ. ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ  59 ವರ್ಷಗಳಿಂದ  ಜಾಗತಿಕ ಬೌದ್ಧಿಕ ಹೆಗ್ಗುರುತು ಮತ್ತು ಪುಸ್ತಕಗಳು ಮತ್ತು ದಾಖಲೆಗಳ ನಿಧಿ ಮನೆಯಾಗಿದೆ. ಇನ್ನು ಮುಂದೆ ಇದನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಕರೆಯಲಾಗುತ್ತದೆ.  

ಭಾರತೀಯ ರಾಷ್ಟ್ರ,  ವಾಸ್ತುಶಿಲ್ಪಿಯ ಹೆಸರು ಮತ್ತು ಪರಂಪರೆಯನ್ನು ವಿರೂಪಗೊಳಿಸಲು, ಅವಹೇಳನ ಮಾಡಲು ಮತ್ತು ನಾಶಮಾಡಲು ಮೋದಿ ಏನು  ಬೇಕಾದರೂ ಮಾಡುತ್ತಾರೆ. ತನ್ನ ಅಭದ್ರತೆಗಳಿಂದ ತುಂಬಿರುವ ಸಣ್ಣ, ಸಣ್ಣ ಮನುಷ್ಯ ಸ್ವಯಂ ಘೋಷಿತ ವಿಶ್ವಗುರು ಎಂದು ಲೇವಡಿ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com