ಕರ್ನಾಟಕದಲ್ಲಿ ಸಾವರ್ಕರ್ ಪಠ್ಯಕ್ಕೆ ಕೊಕ್: ನಿಮ್ಮ ನಿಲುವೇನು? ಉದ್ಧವ್ ಠಾಕ್ರೆಯನ್ನು ಪ್ರಶ್ನಿಸಿದ ಬಿಜೆಪಿ

ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಕರ್ನಾಟಕ ಸರ್ಕಾರದ ಕ್ರಮವನ್ನು ಅಲ್ಪಸಂಖ್ಯಾತರ ಓಲೈಕೆ ಎಂದು ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕರು ಕರೆದಿದ್ದು ಈ ವಿಷಯದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆಯನ್ನು ಪ್ರಶ್ನಿಸಿದ್ದಾರೆ.
ಉದ್ಧವ್ ಠಾಕ್ರೆ-ದೇವೇಂದ್ರ ಫಡ್ನವಿಸ್
ಉದ್ಧವ್ ಠಾಕ್ರೆ-ದೇವೇಂದ್ರ ಫಡ್ನವಿಸ್

ಮುಂಬೈ: ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಕರ್ನಾಟಕ ಸರ್ಕಾರದ ಕ್ರಮವನ್ನು ಅಲ್ಪಸಂಖ್ಯಾತರ ಓಲೈಕೆ ಎಂದು ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕರು ಕರೆದಿದ್ದು ಈ ವಿಷಯದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆಯನ್ನು ಪ್ರಶ್ನಿಸಿದ್ದಾರೆ.

6ನೇ ತರಗತಿಯಿಂದ 10ನೇ ತರಗತಿವರೆಗಿನ ಪಠ್ಯದಲ್ಲಿ ಬದಲಾವಣೆ
RSS ಸಂಸ್ಥಾಪಕ ಕೆಬಿ ಹೆಡಗೇವಾರ್ ಮತ್ತು ಹಿಂದುತ್ವ ಸಿದ್ಧಾಂತವಾದಿ ವಿ ಡಿ ಸಾವರ್ಕರ್ ಸೇರಿದಂತೆ ಇತರ ಅಧ್ಯಾಯಗಳನ್ನು ತೆಗೆದುಹಾಕುವ ಮೂಲಕ ಈ ಶೈಕ್ಷಣಿಕ ವರ್ಷಕ್ಕೆ ರಾಜ್ಯದಲ್ಲಿ 6ರಿಂದ 10ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಅನುಮೋದನೆ ನೀಡಿತ್ತು.

'ಪಠ್ಯಪುಸ್ತಕಗಳಿಂದ ತೆಗೆದುಹಾಕಬಹುದು, ಜನರ ಹೃದಯದಿಂದ ಅಲ್ಲ'
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ದಕ್ಷಿಣ ರಾಜ್ಯ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಕಾಂಗ್ರೆಸ್ ಸಾವರ್ಕರ್ ಮತ್ತು ಹೆಡಗೇವಾರ್ ಅವರನ್ನು ಪಠ್ಯಪುಸ್ತಕಗಳಿಂದ ತೆಗೆದುಹಾಕಬಹುದು. ಆದರೆ ಜನರ ಹೃದಯ ಮತ್ತು ಮನಸ್ಸಿನಿಂದ ಅಲ್ಲ. ಮಹಾರಾಷ್ಟ್ರದ ಪ್ರತಿಪಕ್ಷಗಳು ಕರ್ನಾಟಕದ ಮಾದರಿಯನ್ನು ಪುನರಾವರ್ತಿಸಲು ಬಯಸುತ್ತವೆ. ಈ ವಿಷಯದಲ್ಲಿ ಉದ್ಧವ್ ಠಾಕ್ರೆ ಅವರ ನಿಲುವು ಏನು ಎಂದು ನಾನು ಕೇಳಲು ಬಯಸುತ್ತೇನೆ ಎಂದರು.

ಅಧಿಕಾರಕ್ಕಾಗಿ ಠಾಕ್ರೆ ತಮ್ಮ ಸಿದ್ಧಾಂತವನ್ನು ರಾಜಿ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ಫಡ್ನವೀಸ್ ಹೇಳಿದ್ದಾರೆ. ನಾಗ್ಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಫಡ್ನವೀಸ್ ಪಕ್ಷದ ಸಹೋದ್ಯೋಗಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವಂಕುಲೆ, ಠಾಕ್ರೆ ಅವರು ಪಠ್ಯಪುಸ್ತಕ ವಿಷಯದ ಬಗ್ಗೆ ತಮ್ಮ ನಿಲುವನ್ನು ತೆಗೆದುಕೊಳ್ಳಬೇಕು. ಹಿಂದಿನ ಸರ್ಕಾರ ತಂದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರದ ಬಗ್ಗೆ ಸ್ಪಷ್ಟಪಡಿಸಬೇಕು ಎಂದರು.

ಸಾವರ್ಕರ್ ಮತ್ತು ಹೆಡಗೇವಾರ್ ಅವರ ಅಧ್ಯಾಯಗಳನ್ನು ತೆಗೆದುಹಾಕುವುದರ ಜೊತೆಗೆ ಸಮಾಜ ಸುಧಾರಕಿ ಮತ್ತು ಶಿಕ್ಷಕಿ ಸಾವಿತ್ರಿಬಾಯಿ ಫುಲೆ, ಜವಾಹರಲಾಲ್ ನೆಹರು ಅವರು ಇಂದಿರಾಗಾಂಧಿ ಅವರಿಗೆ ಬರೆದ ಪತ್ರ ಮತ್ತು ಡಾ ಬಿಆರ್ ಅಂಬೇಡ್ಕರ್ ಅವರ ಕವನವನ್ನು ಪಠ್ಯಪುಸ್ತಕಗಳಲ್ಲಿ ಸೇರಿಸಲು ಕರ್ನಾಟಕ ಸರ್ಕಾರ ಯೋಜಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com