
ಮಧ್ಯಪ್ರದೇಶ: ಮಧ್ಯಪ್ರದೇಶದ ಮೊರೆನಾದ ದೇವ್ ಪುರಿ ಬಾಬಾ ಪ್ರದೇಶದಲ್ಲಿ ಭೀಕರ ರಸ್ತೆ ಅಫಘಾತ ಸಂಭವಿಸಿದ್ದು, ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದ ಪರಿಣಾಮ ಮೂವರು ದುರ್ಮರಣವನ್ನಪ್ಪಿ, 7 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಘಟನೆಯ ಕುರಿತು ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶೈಲೇಂದ್ರ ಸಿಂಗ್ ಚೌಹಾಣ್, “ಗ್ವಾಲಿಯರ್‌ನಿಂದ ದೆಹಲಿಗೆ ಹೋಗುವ ಮಾರ್ಗದಲ್ಲಿ ಟ್ರಕ್ ಮತ್ತು ಪ್ರಯಾಣಿಕರ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಮತ್ತಷ್ಟು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಆಂಧ್ರಪ್ರದೇಶ: ಕಾರು-ಸರಕು ವಾಹನ ಡಿಕ್ಕಿ, ನಾಲ್ವರ ಸಾವು
ಮೇ 31ರಂದು ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಕಾರು ಹೊತ್ತಿ ಉರಿದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು.
Advertisement