ದೇಶ

ಮನುಸ್ಮೃತಿ ಉಲ್ಲೇಖಿಸಿದ ಗುಜರಾತ್ ಹೈಕೋರ್ಟ್; ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ಮನವಿ ತಿರಸ್ಕಾರ

ಮನುಸ್ಮೃತಿ ಉಲ್ಲೇಖಿಸಿದ ಗುಜರಾತ್ ಹೈಕೋರ್ಟ್; ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ಮನವಿ ತಿರಸ್ಕಾರ
ಗುಜರಾತ್ ಹೈಕೋರ್ಟ್
Published On :

ಅಹಮದಾಬಾದ್: ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿರುವ 16 ವರ್ಷದ  ಬಾಲಕಿ ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮನುಸ್ಮೃತಿ ಉಲ್ಲೇಖಿಸಿದ ಗುಜರಾತ್ ಹೈಕೋರ್ಟ್, ಈ ಹಿಂದೆ ಹೆಣ್ಣುಮಕ್ಕಳು ಚಿಕ್ಕ ವಯಸ್ಸಿನಲ್ಲಿ ಮದುವೆಯಾಗುವುದು ಮತ್ತು 17 ವರ್ಷ ದಾಟುವ ಮುನ್ನವೇ ಮಗುವಿಗೆ ಜನ್ಮ ನೀಡುವುದು ಸಾಮಾನ್ಯ ಸಂಗತಿಯಾಗಿತ್ತು ಎಂದು ಹೇಳಿದೆ.

ಏಳು ತಿಂಗಳ ಗರ್ಭಿಣಿಯಾಗಿರುವ ಅತ್ಯಾಚಾರ ಸಂತ್ರಸ್ತೆ, ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಮೀರ್ ದವೆ ಅವರು, ಆರೋಪಿ ಮತ್ತು ಬಾಲಕಿಯ ನಡುವೆ "ರಾಜಿ" ಸಾಧ್ಯತೆಯನ್ನು ಪರಿಶೀಲಿಸಲು ಆರೋಪಿಯನ್ನು ಹಾಜರುಪಡಿಸುವಂತೆ ಗುರುವಾರ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸ್ತುತ ರಾಜ್ಯದ ಮೊರ್ಬಿ ಪಟ್ಟಣದ ಉಪ ಜೈಲಿನಲ್ಲಿರುವ 23 ವರ್ಷದ ಆರೋಪಿಯನ್ನು ಶುಕ್ರವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿ ತನಗೆ ಮದುವೆಯಾಗಿ ಎರಡು ವರ್ಷ ಕಳೆದಿದ್ದು, ತನ್ನ ಪತ್ನಿಯೂ ಗರ್ಭಿಣಿಯಾಗಿದ್ದಾಳೆ ಎಂದು ತಿಳಿಸಿದನು.

ಈಗ ರಾಜಿ ಸಾಧ್ಯತೆಯನ್ನು ನ್ಯಾಯಾಲಯ ತಳ್ಳಿಹಾಕಿದೆ ಎಂದು ಅರ್ಜಿದಾರ ಸಿಕಂದರ್ ಸೈಯದ್ ಪರ ವಕೀಲರು ತಿಳಿಸಿದ್ದಾರೆ.

"ಬಾಲಕಿಯ ವೈದ್ಯಕೀಯ ವರದಿಯ ಆಧಾರದ ಮೇಲೆ ಆಕೆಯ ಗರ್ಭಪಾತಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಾಲಯ, ಸೋಮವಾರ ಈ ವಿಷಯವನ್ನು ಮತ್ತಷ್ಟು ವಿಚಾರಣೆ ನಡೆಸಲಿದ್ದು, ಬಾಲಕಿಯ ಅಭಿಪ್ರಾಯ ತಿಳಿಯಲು ತಂದೆ ಸಮಯಾವಕಾಶ ನೀಡಿದೆ" ಎಂದು ಸೈಯದ್ ಅವರು ಹೇಳಿದ್ದಾರೆ.

ಈ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯ, ಒಂದು ಕಾಲದಲ್ಲಿ ಹುಡುಗಿಯರು ಚಿಕ್ಕ ವಯಸ್ಸಿನಲ್ಲಿ ಮದುವೆಯಾಗುವುದು ಮತ್ತು 17 ವರ್ಷ ತುಂಬುವ ಮೊದಲು ಮಗುವಿಗೆ ಜನ್ಮ ನೀಡುವುದು ಸಾಮಾನ್ಯವಾಗಿತ್ತು. ಈ ಕುರಿತು ಮನುಸ್ಮೃತಿ ಓದುವಂತೆ ನ್ಯಾಯಾಧೀಶ ಸಮೀರ್ ದವೆ ಅವರು ವಕೀಲರಿಗೆ ಸಲಹೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.