
ಒಡಿಶಾ: ಬಾಲಸೋರ್ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 292 ಕ್ಕೆ ಏರಿಕೆ ಕಂಡಿದೆ.
ತೀವ್ರವಾಗಿ ಗಾಯಗೊಂಡಿದ್ದ ಪಶ್ಚಿಮ ಬಂಗಾಳದ 24 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕಟಕ್ ನ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೌತ್ 24 ಪರಗಣಾಸ್ ಜಿಲ್ಲೆಯ ನಿವಾಸಿಯಾಗಿದ್ದ ಪಲ್ತು ನಸ್ಕರ್ ಮೃತ ವ್ಯಕ್ತಿಯಾಗಿದ್ದು, ಜೂ.02 ರಿಂದ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಈಸ್ಟ್ ಕೋಸ್ಟ್ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆತ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಜೂ.17 ರಂದು ಆತನ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.
ರೈಲು ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಎಸ್ ಸಿಬಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಾದ 205 ಮಂದಿಯ ಪೈಕಿ 45 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದು 12 ಮಂದಿ ಐಸಿಯುನಲ್ಲಿದ್ದಾರೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement