ಸಿಕ್ಕಿಂ: ಪ್ರವಾಹ, ಭೂಕುಸಿತದಿಂದ ಚುಂಗ್ ತಾಂಗ್ ನಲ್ಲಿ ಸಿಲುಕಿದ 300 ಪ್ರವಾಸಿಗರ ರಕ್ಷಣೆ

ಪ್ರವಾಹ ಹಾಗೂ ಭೂಕುಸಿತದಿಂದಾಗಿ ಸಿಕ್ಕಿಂನ ಉತ್ತರ ಭಾಗದ ಚುಂಗ್ ತಾಂಗ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ 300 ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ.
ರಕ್ಷಣಾ ಕಾರ್ಯಾಚರಣೆ ಚಿತ್ರ
ರಕ್ಷಣಾ ಕಾರ್ಯಾಚರಣೆ ಚಿತ್ರ

ಸಿಕ್ಕಿಂ: ಪ್ರವಾಹ ಹಾಗೂ ಭೂಕುಸಿತದಿಂದಾಗಿ ಸಿಕ್ಕಿಂನ ಉತ್ತರ ಭಾಗದ ಚುಂಗ್ ತಾಂಗ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ 300 ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ.

ರಕ್ಷಣಾ ಕಾರ್ಯಾಚರಣೆ ವೇಳೆಯಲ್ಲಿ ಪ್ರವಾಸಿಗರಿಗೆ ಆಹಾರ, ಸೂಕ್ತ ವೈದ್ಯಕೀಯ ನೆರವು ಹಾಗೂ ವಿಶ್ರಾಂತಿ ಸ್ಥಳವನ್ನು ಒದಗಿಸಲಾಗಿದೆ ಎಂದು ಸೇನೆಯ ಪಿಆರ್ ಓ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ಹೇಳಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ವ್ಯಕ್ತಿಯನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಸ್ಥಳಾಂತರಿಸಲಾಯಿತು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯಕ್ಕೆ ರೋಗಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಭಾಗದಲ್ಲಿ ಗುರುವಾರದಿಂದ ದಿಢೀರ್ ಭಾರಿ ಮಳೆಯಿಂದಾಗಿ  ಹಲವೆಡೆ ಭೂ ಕುಸಿತವಾಗಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com