ಕುಸ್ತಿಪಟುಗಳ ನಡುವೆ ಶುರುವಾಯ್ತು ರಾಜಕೀಯ ಕಿತ್ತಾಟ: ಸಾಕ್ಷಿ ಮಲಿಕ್ 'ಕಾಂಗ್ರೆಸ್ ಕೈಗೊಂಬೆ' ಎಂದ ಬಬಿತಾ ಫೋಗಟ್

ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ನಡುವೆ ರಾಜಕೀಯ ಕಿತ್ತಾಟವೊಂದು ಆರಂಭವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ನಡುವೆ ರಾಜಕೀಯ ಕಿತ್ತಾಟವೊಂದು ಆರಂಭವಾಗಿದೆ.

ಮಾಜಿ ಕಾಮನ್​ವೆಲ್ತ್​ ಗೇಮ್​ ಚಿನ್ನದ ಪದಕ ವಿಜೇತೆ, ಬಿಜೆಪಿ ಪಕ್ಷದ ಕಾರ್ಯಕರ್ತೆ ಬಬಿತಾ ಫೋಗಟ್ ಅವರು, ಸಾಕ್ಷಿ ಮಲಿಕ್ ವಿರುದ್ಧ ಕಿಡಿಕಾರಿದ್ದು, ಸಾಕ್ಷಿ ಕಾಂಗ್ರೆಸ್ ಪಕ್ಷದ ಕೈಗೊಂಬೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನನ್ನ ಸಹೋದರಿ ಸಾಕ್ಷಿ ಮತ್ತು ಅವಳ ಗಂಡನ ವಿಡಿಯೋ ನೋಡುವಾಗ ನನಗೆ ತುಂಬಾ ಬೇಸರವಾಯಿತು. ಜತೆಗೆ ನಗು ಕೂಡಾ ಬಂತು. ಈ ವಿಡಿಯೊದಲ್ಲಿ ಸಾಕ್ಷಿ ಮಲಿಕ್ ತೋರಿಸಿದ ಅನುಮತಿ ಪತ್ರದಲ್ಲಿ ನನ್ನ ಸಹಿ ಇಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಗೌರವಾನ್ವಿತ ಪ್ರಧಾನಿ ಮೋದಿ ಮತ್ತು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ನಂಬಿಕೆ ಇದೆ. ಖಂಡಿತವಾಗಿಯೂ ಸತ್ಯ ಹೊರಬರುತ್ತದೆ. ಒಬ್ಬ ಮಹಿಳಾ ಆಟಗಾರ್ತಿಯಾಗಿ ನಾನು ದೇಶದ ಎಲ್ಲ ಆಟಗಾರ್ತಿಯರ ಜೊತೆಗಿರುತ್ತೇನೆ, ಮುಂದೆಯೂ ಕೂಡ ಇರುತ್ತೇನೆ. ಆದರೆ, ಸಾಕ್ಷಿ ಅವರು ಈ ಪ್ರಕರಣದಲ್ಲಿ ಕಾಂಗ್ರೆಸ್​ನ ಕೈಗೊಂಬೆಯಾಗಿದ್ದಾರೆ ಎಂದು ನನಗೆ ಸ್ಪಷ್ಟವಾಗಿ ತಿಳಿಯುತ್ತಿದೆ ಎಂದು ಹೇಳಿದ್ದಾರೆ.

“ನೀವು ಬಾದಾಮಿ ಹಿಟ್ಟಿನಿಂದ ಮಾಡಿದ ರೊಟ್ಟಿಯನ್ನು ತಿನ್ನಬಹುದು, ಆದರೆ ನಾವು ನನ್ನ ದೇಶದ ಜನರು ಗೋಧಿಯಿಂದ ತಯಾರಿಸಿದ ಬ್ರೆಡ್ ಕೂಡ ತಿನ್ನುತ್ತೇವೆ. ನೀವು ಕಾಂಗ್ರೆಸ್ ಕೈಗೊಂಬೆಯಾಗಿದ್ದೀರಿ ಎಂದು ದೇಶದ ಜನರಿಗೆ ಅರ್ಥವಾಗಿದೆ. ನಿಮ್ಮ ನಿಜವಾದ ಉದ್ದೇಶವನ್ನು ಹೇಳಬೇಕಾದ ಸಮಯ ಬಂದಿದೆ” ಎಂದು ಬಬಿತಾ ಅವರು ತಿಳಿಸಿದ್ದಾರೆ.

ಕುಸ್ತಿಪಟುಗಳ ಹೋರಾಟ ರಾಜಕೀಯ ಪ್ರೇರಿತವಾದದ್ದು ಎಂಬ ಆರೋಪಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಾಕ್ಷಿ ಮಲಿಕ್​ ಮತ್ತು ಅವರ ಪತಿ ಸತ್ಯವರ್ತ್ ಕಡಿಯನ್ ಅವರು, ಈ ಕುರಿತು ಸ್ಪಷ್ಟನೆ ನೀಡಿ 11 ನಿಮಿಷಗಳ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದರು.

ತಮ್ಮ ಹೋರಾಟ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧವೇ ಹೊರತು ಕೇಂದ್ರ ಸರ್ಕಾರದ ವಿರುದ್ಧ ಅಲ್ಲ. ನಾವು ಪ್ರತಿಭಟನೆಗೆ ನಡೆಸಲು ಇಬ್ಬರು ಬಿಜೆಪಿ ನಾಯಕರಿಂದ ಪೂರ್ವಾನುಮತಿ ಪಡೆದಿದ್ದೇವೆ ಅದಕ್ಕೆ ನಮ್ಮ ಬಳಿ ಪುರಾವೆಗಳಿವೆ ಎಂದು ಹೇಳಿದ್ದರು. ಈ ಕುರಿತ ದಾಖಲೆಗಳನ್ನೂ ವಿಡಿಯೋದಲ್ಲಿ ತೋರಿಸಿದ್ದರು.

ಇದೇ ವಿಚಾರಕ್ಕೆ ಬಬಿತಾ ಅವರು ಸ್ಪಷ್ಟನೆ ನೀಡಿದ್ದು, ಸಾಕ್ಷಿ ಅವರನ್ನು ಕಾಂಗ್ರೆಸ್​ನ ಕೈಗೊಂಬೆ ಎಂದು ಹೇಳಿದ್ದಾರೆ.

ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ಮೇಲಿನ ಆರೋಪಗಳ ನಿಖೆಗೆ ಕ್ರೀಡಾ ಸಚಿವಾಲಯ ನೇಮಿಸಿರುವ ಮೇಲುಸ್ತುವಾರಿ ಸಮಿತಿಯಲ್ಲಿ ಬಬಿತಾ ಅವರಿಗೂ ಸ್ಥಾನ ನೀಡಲಾಗಿತ್ತು. ಆದರೆ ಇದಕ್ಕೆ ಸಾಕ್ಷಿ ಮಲಿಕ್​ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಬಬಿತಾ ಬಿಜೆಪಿ ಪಕ್ಷದಲ್ಲಿರುವ ಕಾರಣ ಬಿಜೆಪಿ ಸಂಸದರೂ ಆಗಿರುವ ಬ್ರಿಜ್​ ಭೂಷಣ್​ಗೆ ಬೆಂಬಲ ಸೂಚಿಸಬಹುದು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com