ರಾ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ರವಿ ಸಿನ್ಹಾ ನೇಮಕ

ದೇಶದ ಬೇಹುಗಾರಿಕಾ ಸಂಸ್ಥೆ ರಾ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದ ಬೇಹುಗಾರಿಕಾ ಸಂಸ್ಥೆ ರಾ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ. 

ಹಾಲಿ ರಾ ಮುಖ್ಯಸ್ಥ ಸಮಂತ್ ಕುಮಾರ್ ಗೋಯೆಲ್ ಅವರ ನಾಲ್ಕು ವರ್ಷಗಳ ಅಧಿಕಾರಾವಧಿ  ಜೂನ್ 30 ರಂದು ಪೂರ್ಣಗೊಳ್ಳಲಿದ್ದು, ಅವರ ಉತ್ತರಾಧಿಕಾರಿಯಾಗಿ ರವಿ ಸಿನ್ಹಾ ನೇಮಕಗೊಂಡಿದ್ದಾರೆ.

ಛತ್ತೀಸ್‌ಗಢ ಕೇಡರ್‌ನ 1988ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ(IPS) ಅಧಿಕಾರಿಯಾಗಿರುವ ಸಿನ್ಹಾ ಅವರು ಪ್ರಸ್ತುತ ಕ್ಯಾಬಿನೆಟ್ ಸೆಕ್ರೆಟರಿಯಟ್‌ನಲ್ಲಿ ವಿಶೇಷ ಕಾರ್ಯದರ್ಶಿಯಾಗಿದ್ದಾರೆ.

ಎರಡು ವರ್ಷಗಳ ಅವಧಿಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ(ರಾ) ಕಾರ್ಯದರ್ಶಿಯಾಗಿ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com