ಹೈದರಾಬಾದ್: ಆದಾಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇರಿಸಿರುವುದಾಗಿ ಸುಳ್ಳು ಕರೆ, 1 ಕೋಟಿ ರೂ. ಬೇಡಿಕೆ; ವ್ಯಕ್ತಿಯ ಬಂಧನ

ಆದಾಯ ತೆರಿಗೆ ಇಲಾಖೆ ಕಚೇರಿಗಳಲ್ಲಿ ಬಾಂಬ್ ಇರಿಸಿರುವುದಾಗಿ ಸುಳ್ಳು ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 
ಬಂಧನ (ಸಂಗ್ರಹ ಚಿತ್ರ)
ಬಂಧನ (ಸಂಗ್ರಹ ಚಿತ್ರ)

ಹೈದರಾಬಾದ್: ಆದಾಯ ತೆರಿಗೆ ಇಲಾಖೆ ಕಚೇರಿಗಳಲ್ಲಿ ಬಾಂಬ್ ಇರಿಸಿರುವುದಾಗಿ ಸುಳ್ಳು ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಪೊಲೀಸರಿಗೆ ಕರೆ ಮಾಡಿದ್ದ 43 ವರ್ಷದ ವ್ಯಕ್ತಿ ಬಾಂಬ್ ಸ್ಫೋಟಿಸದೇ ಇರುವುದಕ್ಕಾಗಿ 1 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾನೆ. ಈತನನ್ನು ಪೊಲೀಸರು ಬಂಧಿಸಿದ್ದಾರೆ. 

ಈಗ ಬಂಧನಕ್ಕೆ ಒಳಗಾಗಿರುವ ವ್ಯಕ್ತಿ, ಜೂ.12 ರಂದು ಹೈದರಾಬಾದ್ ನ ಪೊಲೀಸ್ ಠಾಣೆಗೆ ಕರೆ ಮಾಡಿ ಐಟಿ ಕಚೇರಿಗಳಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದ. ತನಿಖೆ ನಡೆಸಿದ್ದ ಪೊಲೀಸರಿಗೆ ಇದು ಹುಸಿ ಬಾಂಬ್ ಕರೆ ಎಂಬುದು ಸ್ಪಷ್ಟವಾಗಿತ್ತು.

ಬಾಂಬ್ ಬೆದರಿಕೆ ಹಾಕಿದ ಆರೋಪಿ ಜೈನಿ ರಾಧಾಕೃಷ್ಣನನ್ನು ಇಲ್ಲಿನ ಹಯತ್‌ನಗರದಲ್ಲಿ ಬಂಧಿಸಲಾಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com