54ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ: ಶುಭ ಹಾರೈಸಿದ ಕಾಂಗ್ರೆಸ್ ನಾಯಕರು

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ 54ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಶುಭಕೋರಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ 54ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಶುಭಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆಯವರು, ‘ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾಂವಿಧಾನಿಕ ಮೌಲ್ಯಗಳಿಗೆ ನಿಮ್ಮ ಅಚಲ ಬದ್ಧತೆ ಮತ್ತು ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮ ಅದಮ್ಯ ಧೈರ್ಯ ಮೆಚ್ಚುವಂತದ್ದು. ಸಹಾನುಭೂತಿ ಮತ್ತು ಸಾಮರಸ್ಯದ ಸಂದೇಶ ಹರಡುವುದನ್ನು ಮುಂದುವರಿಸಿ. ನಿಮ್ಮ ಸಂದೇಶ ಲಕ್ಷಾಂತರ ಭಾರತೀಯರ ಧ್ವನಿಯಾಗಲಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ತೆರೆದು ದೇಶದಾದ್ಯಂತ ಸೌಹಾರ್ದತೆಯ ಸಿಹಿ ಹಂಚಿ ಭಾರತೀಯರ ಮನಸ್ಸುಗಳನ್ನು ಜೋಡಿಸುತ್ತಿರುವ ಭವಿಷ್ಯದ ಭರವಸೆಯ ಆಶಾಕಿರಣ ಮತ್ತು ನಮ್ಮೆಲ್ಲರ ಹೆಮ್ಮೆಯ ನಾಯಕ ರಾಹುಲ್ ಗಾಂಧಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಹೇಳಿದ್ದಾರೆ.

‘ನಿಮ್ಮ ಸೈದ್ದಾಂತಿಕ ಬದ್ದತೆ, ಜನಪರ ಕಾಳಜಿ ಮತ್ತು ದ್ವೇಷವನ್ನು ಪ್ರೀತಿಯಿಂದ ಗೆಲ್ಲಬಹುದೆಂಬ ನಂಬಿಕೆ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ನಾಯಕರು ಮತ್ತು ಕಾರ್ಯಕರ್ತರಿಗೆ ಆದರ್ಶವಾಗಲಿ. ನಿಮ್ಮ ಚಿಂತನೆಯ ಮುನ್ನೋಟ ಮತ್ತು ಮಾರ್ಗದರ್ಶನ ನಮಗೆ ಸದಾ ಲಭಿಸಲಿ’ ಎಂದು ಶುಭ ಹಾರೈಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಸೇವೆಯಲ್ಲಿ ನಿಮ್ಮ ಸಮರ್ಪಣೆ ಮತ್ತು ಬದ್ಧತೆ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಪ್ರಸಕ್ತ ವರ್ಷ ನಿಮಗೆ ಅಪಾರ ಸಂತೋಷ, ಉತ್ತಮ ಆರೋಗ್ಯ ಮತ್ತು ಧನಾತ್ಮಕ ಬದಲಾವಣೆಯನ್ನು ತರಲು ನಿಮಗೆ ಹೆಚ್ಚಿನ ಶಕ್ತಿ ದೊರೆಯಲಿ’ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com