ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
Updated on

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಹಾಗೂ ನಗರ ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್​ ಅವರು ಉಪಸ್ಥಿತರಿದ್ದರು.

ಕೇಂದ್ರ ಸರ್ಕಾರ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ: ಸಿಎಂ
ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳುವ ಮುನ್ನ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಿಸಿದೆ. ಕೇಂದ್ರದ ಬಿಜೆಪಿ ಸರ್ಕಾರ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಆದರೂ ಜುಲೈ 1ಕ್ಕೆ ಅಕ್ಕಿ ನೀಡುವ ಪ್ರಕ್ರಿಯೆ ಆರಂಭಿಸಲು ನಾವು ನಿರ್ಧರಿಸಿದ್ದೇವೆ ಎಂದು ಸಿಎಂ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com