ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಬೈಪಾಸ್ ಸರ್ಜರಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ವೈದ್ಯರು ಬೈಪಾಸ್ ಸರ್ಜರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ
ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ
Updated on

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ವೈದ್ಯರು ಬೈಪಾಸ್ ಸರ್ಜರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಬುಧವಾರ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚೆನ್ನೈನಲ್ಲಿರುವ ಖಾಸಗಿ ಆಸ್ಪತ್ರೆ ತಿಳಿಸಿದೆ.

ಕಳೆದ ವಾರ ಉದ್ಯೋಗಕ್ಕಾಗಿ ಲಂಚ ಪಡೆದ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಯಿಂದ ಸೆಂಥಿಲ್ ಬಾಲಾಜಿ ಬಂಧನಕ್ಕೀಡಾಗಿದ್ದರು. ಬಂಧನ ಬೆನ್ನಲ್ಲೇ ಅವರು ಹೃದಯ ಬಡಿತದ ಪರಿಧಮನಿಯ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ಕಾವೇರಿ ಆಸ್ಪತ್ರೆಯ ವೈದ್ಯಕೀಯ ಬುಲೆಟಿನ್ ತಿಳಿಸಿದೆ.

"ಅವರು ಪ್ರಸ್ತುತ ಹಿಮೋಡೈನಮಿಕ್ ಆಗಿ ಸ್ಥಿರರಾಗಿದ್ದಾರೆ ಮತ್ತು ಮೇಲ್ವಿಚಾರಣೆಯಲ್ಲಿದ್ದಾರೆ" ಎಂದು ಅದು ಹೇಳಿದೆ. ಬಾಲಾಜಿಯನ್ನು ಆರಂಭದಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ನ್ಯಾಯಾಲಯದ ಆದೇಶದ ಮೇರೆಗೆ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com