ಯೋಗಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟಿದ್ದು ಪ್ರಧಾನಿ ಮೋದಿ ನೇತೃತ್ವದ NDA ಸರ್ಕಾರ: ಶಶಿ ತರೂರ್

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಇದೀಗ ಹಲವು ರಾಜಕೀಯ ಮಜಲುಗಳನ್ನು ತೆಗೆದುಕೊಳ್ಳುತ್ತಿದೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಮುಂಜಾನೆ ಶಿರ್ಷಾಸನ ಮಾಡುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದ ಕಾಂಗ್ರೆಸ್...
ಪ್ರಧಾನಿ ಮೋದಿ-ಶಶಿ ತರೂರ್
ಪ್ರಧಾನಿ ಮೋದಿ-ಶಶಿ ತರೂರ್

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಇದೀಗ ಹಲವು ರಾಜಕೀಯ ಮಜಲುಗಳನ್ನು ತೆಗೆದುಕೊಳ್ಳುತ್ತಿದೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಮುಂಜಾನೆ ಶಿರ್ಷಾಸನ ಮಾಡುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದ ಕಾಂಗ್ರೆಸ್, ಯೋಗವನ್ನು ಜನಪ್ರಿಯಗೊಳಿಸಿದ ಮತ್ತು ರಾಷ್ಟ್ರೀಯ ನೀತಿಯ ಭಾಗವಾಗಿಸಿದ ಪಂಡಿತ್ ನೆಹರೂ ಅವರಿಗೆ ಧನ್ಯವಾದಗಳು' ಎಂದು ಶೀರ್ಷಿಕೆ ಕೊಟ್ಟಿದೆ. 

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಹಿರಿಯ ಕಾಂಗ್ರೆಸ್ ನಾಯಕ ಶಶಿತರೂರ್ ಟ್ವೀಟ್ ಮಾಡಿದ್ದು ನಮ್ಮ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ವಿದೇಶಾಂಗ ಸಚಿವಾಲಯ ಸೇರಿದಂತೆ ಯೋಗವನ್ನು ಪುನರುಜ್ಜೀವನಗೊಳಿಸಿ ಜನಪ್ರಿಯಗೊಳಿಸಿದವರಿಗೂ ನಾವು ಧನ್ಯವಾದ ಹೇಳಬೇಕು. ಎನ್ ಡಿಎ ಸರ್ಕಾರ ವಿಶ್ವಸಂಸ್ಥೆಯ ಮೂಲಕ ಯೋಗ ದಿನವನ್ನು ಅಂತಾರಾಷ್ಟ್ರೀಯಗೊಳಿಸಿದೆ. ನಾನು ದಶಕಗಳಿಂದ ಹೇಳುತ್ತಾ ಬಂದಿದ್ದೇನೆ, ಯೋಗವು ನಮ್ಮ ಮೃದು ಶಕ್ತಿಯ ಪ್ರಮುಖ ಭಾಗವಾಗಿದೆ. ಅದನ್ನು ಗುರುತಿಸುವುದು ಒಳ್ಳೆಯದು ಎಂದು ಅವರು ಹೇಳಿದರು.

ಕಾಂಗ್ರೆಸ್‌ನ ಈ ಟ್ವೀಟ್‌ಗೆ ಸಾಮಾಜಿಕ ಜಾಲತಾಣ ಬಳಕೆದಾರರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ದಿನ ರಾಜಕೀಯ ಬೇಡ ಎಂದು ಕೆಲವರು ಬರೆದಿದ್ದಾರೆ. 2019ರ ಯೋಗ ದಿನದಂದು ರಾಹುಲ್ ಗಾಂಧಿ ಮಾಡಿದ ಟ್ವೀಟ್ ಅನ್ನು ಅನೇಕ ಬಳಕೆದಾರರು ನೆನಪಿಸಿದ್ದಾರೆ. ಅದರಲ್ಲಿ ಅವರು ಯೋಗ ಮಾಡುವ ತರಬೇತಿ ಪಡೆದ ನಾಯಿಗಳ ಫೋಟೋವನ್ನು ಹಾಕುವ ಮೂಲಕ ನ್ಯೂ ಇಂಡಿಯಾ ಎಂದು ಶೀರ್ಷಿಕೆ ನೀಡಿದ್ದಾರೆ.

ಯೋಗ ಜಾಗತಿಕ ಆಂದೋಲನವಾಗಿದೆ: ಪ್ರಧಾನಿ ಮೋದಿ
ಪ್ರಧಾನಿ ಮೋದಿ ಅಮೆರಿಕದ ನ್ಯೂಯಾರ್ಕ್‌ನಲ್ಲಿ ಯೋಗ ದಿನವನ್ನು ಆಚರಿಸಿದ್ದಾರೆ. 2014ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗ ದಿನದ ಪ್ರಸ್ತಾಪ ಬಂದಾಗ ದಾಖಲೆ ಸಂಖ್ಯೆಯ ದೇಶಗಳು ಅದನ್ನು ಬೆಂಬಲಿಸಿವೆ ಎಂದು ಪ್ರಧಾನಿ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. ಅಂದಿನಿಂದ, ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಜಾಗತಿಕ ಚಳುವಳಿಯಾಗಿ, ಜಾಗತಿಕ ಭಾವನೆಯಾಗಿ ಮಾರ್ಪಟ್ಟಿದೆ. ಭಾರತದ ಕರೆಗೆ ವಿಶ್ವದ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ, ಅಭೂತಪೂರ್ವ. ವಿಶ್ವಸಂಸ್ಥೆಯಲ್ಲಿ ಬುಧವಾರ ನಡೆಯಲಿರುವ ಯೋಗ ಸಮಾರಂಭದ ನೇತೃತ್ವವನ್ನು ಮೋದಿ ಅವರು ಜನರಲ್ ಅಸೆಂಬ್ಲಿ ಅಧ್ಯಕ್ಷ ಸಬಾಹ್ ಕೊರೊಸಿ ಮತ್ತು ಉಪ ಕಾರ್ಯದರ್ಶಿ ಅಮಿನಾ ಮೊಹಮ್ಮದ್ ಅವರೊಂದಿಗೆ ನಡೆಸಲಿದ್ದಾರೆ.

ಇಂದು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ದೇಶದ ಹಲವು ಗಣ್ಯರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗ ಪ್ರದರ್ಶಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com