ರಾಜಸ್ಥಾನದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ; ಆರೋಪಿಗಳ ಪೈಕಿ ಇಬ್ಬರು ಪೊಲೀಸರು!

ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದ್ದು, ಘಟನೆಯಲ್ಲಿನ ಶಂಕಿತ ಪಾತ್ರಕ್ಕಾಗಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜೈಪುರ: ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದ್ದು, ಘಟನೆಯಲ್ಲಿನ ಶಂಕಿತ ಪಾತ್ರಕ್ಕಾಗಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಖಾಜುವಾಲಾ ಪ್ರದೇಶದಲ್ಲಿ 20 ವರ್ಷದ ಯುವತಿಯ ಶವ ಪತ್ತೆಯಾಗಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಐಜಿ) ಓಂ ಪ್ರಕಾಶ್ ತಿಳಿಸಿದ್ದಾರೆ.

'ಖಾಜುವಾಲಾ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ಸೇರಿದಂತೆ ಮೂವರು ವ್ಯಕ್ತಿಗಳು ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಕೂಡಲೇ ಇಬ್ಬರೂ ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ' ಎಂದರು.

ಸಂತ್ರಸ್ತೆಯ ಕುಟುಂಬದ ಸದಸ್ಯರು ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪಿಗೆ ನೀಡಲು ನಿರಾಕರಿಸಿದ್ದಾರೆ ಮತ್ತು ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದಾರೆ. ‘ಧರಣಿ’ಯನ್ನೂ ನಡೆಸಿದರು.

ಮರಣೋತ್ತರ ಪರೀಕ್ಷೆಗಾಗಿ ಸಂತ್ರಸ್ತೆಯ ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ತೇಜಸ್ವಿನಿ ಗೌತಮ್ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ 376-ಡಿ (ಗ್ಯಾಂಗ್ ರೇಪ್) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಖಜುವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಾದ ಮನೋಜ್ ಮತ್ತು ಭಗೀರಥ ಮೂರನೇ ಆರೋಪಿಯೊಂದಿಗೆ ಯುವತಿಯನ್ನು ಮನೆಗೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಂತ್ರಸ್ತೆ ಮತ್ತು ಆರೋಪಿಗಳು ಪರಸ್ಪರ ಪರಿಚಿತರು ಎಂದು ಕರೆ ದಾಖಲೆಗಳನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ಇಬ್ಬರು ಕಾನ್‌ಸ್ಟೆಬಲ್‌ಗಳ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ. ಹೆಚ್ಚುವರಿ ಎಸ್ಪಿ ದೀಪಕ್ ಶರ್ಮಾ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಪ್ರತಿಪಕ್ಷ ಬಿಜೆಪಿ ಘಟನೆಯ ಬಗ್ಗೆ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್ ಜೈಪುರದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com