ಉಷ್ಣ ಮಾರುತಕ್ಕೆ ಹೆಚ್ಚುತ್ತಿರುವ ಸಾವು-ನೋವು: 7 ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಸಭೆ

ಉಷ್ಣ ಮಾರುತಕ್ಕೆ ದೇಶದ ಹಲವು ರಾಜ್ಯಗಳಲ್ಲಿ ಸಾವು-ನೋವುಗಳು ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಗಂಭೀರತೆ ಅರಿತ ಕೇಂದ್ರ ಸರ್ಕಾರ 7 ರಾಜ್ಯಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದೆ.
ಮನ್ಸುಖ್ ಮಾಂಡವಿಯಾ
ಮನ್ಸುಖ್ ಮಾಂಡವಿಯಾ
Updated on

ನವದಹಲಿ: ಉಷ್ಣ ಮಾರುತಕ್ಕೆ ದೇಶದ ಹಲವು ರಾಜ್ಯಗಳಲ್ಲಿ ಸಾವು-ನೋವುಗಳು ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಗಂಭೀರತೆ ಅರಿತ ಕೇಂದ್ರ ಸರ್ಕಾರ 7 ರಾಜ್ಯಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನೇತೃತ್ವದಲ್ಲಿ ಬುಧವಾರ ಉನ್ನತ ಮಟ್ಟದ ಸಭೆ ನಡೆಸಿದ್ದು, ಮಾಂಡವೀಯಾ ಅವರು ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ವರ್ಚುವಲ್ ಮೂಲಕ ಸಭೆ ನಡೆಸಿದ ಕೇಂದ್ರ ಸಚಿವರು, ಸಾವಿನ ಸಂಖ್ಯೆ ಸೇರಿದಂತೆ ಪರಿಸ್ಥಿತಿಗಳ ಕುರಿತು ವರದಿ ನೀಡುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಜನರಿಗೆ ಎಚ್ಚರಿಕೆಗಳು ಹಾಗೂ ಸಲಹೆಗಳ ಮಾರ್ಗಸೂಚಿಗಳನ್ನು ಹೊರಡಿಸುವಂತೆಯೂ ಸೂಚಿಸಿದರು.

ಉತ್ತರ ಪ್ರದೇಶ ಮತ್ತು ಬಿಹಾರ, ಒಡಿಶಾ, ಜಾರ್ಖಂಡ್, ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಆರೋಗ್ಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com