ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ

ಶಹಜಹಾನ್ಪುರ: ಬೈಕ್ ನಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶ ಶಹಜಹಾನ್ಪುರ-ಲಖನೌ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ರಘುವೀರ್ (34), ಅವರ ಪತ್ನಿ ಜ್ಯೋತಿ (30), ಜೂಲಿ (36) ಮತ್ತು ಅವರ ಮಕ್ಕಳಾದ ಅಭಿ (3), ಮತ್ತು ಕೃಷ್ಣ (5) ಎಂದು ಗುರುತಿಸಲಾಗಿದೆ.
ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಐವರು, ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದ್ವಿಚಕ್ರ ವಾಹನ ಸ್ಕಿಡ್ ಆಗಿ ಕೆಳಗೆ ಬಿದ್ದಿದೆಯೇ ಅಥವಾ ವಾಹನ ಡಿಕ್ಕಿ ಹೊಡೆದಿದೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


