ಜಮ್ಮು-ಕಾಶ್ಮೀರ: ಪೊಂಚ್ ನಲ್ಲಿ ಉಗ್ರರ ಜೊತೆಗಿನ ಎನ್ ಕೌಂಟರ್ ನಲ್ಲಿ ಭಾರತೀಯ ಯೋಧನಿಗೆ ಗಾಯ

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ದಾಟಲು ಯತ್ನಿಸುತ್ತಿದ್ದ ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನಾ ಯೋಧರೊಬ್ಬರು ಗಾಯಗೊಂಡಿದ್ದಾರೆ.
ಭದ್ರತಾ ಪಡೆಗಳ ಚಿತ್ರ
ಭದ್ರತಾ ಪಡೆಗಳ ಚಿತ್ರ

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ದಾಟಲು ಯತ್ನಿಸುತ್ತಿದ್ದ ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನಾ ಯೋಧರೊಬ್ಬರು ಗಾಯಗೊಂಡಿದ್ದಾರೆ. ನಿನ್ನೆ ದಿನ ಗಡಿ ನಿಯಂತ್ರಣ ರೇಖೆಯ ಮಚಿಲಿ ಸೆಕ್ಟರ್ ನಲ್ಲಿ  ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿ ನಾಲ್ವರನ್ನು ಹತ್ಯೆ ಮಾಡಿದ ನಂತರ ಈ ಎನ್ ಕೌಂಟರ್ ನಡೆದಿದೆ. 

ಶುಕ್ರವಾರ ತಡರಾತ್ರಿ ಗುಲ್ಪುರ್ ಸೆಕ್ಟರ್‌ನ ಫಾರ್ವರ್ಡ್ ರೇಂಜರ್ ನಲ್ಲಾಹ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಟ್ಟವಾದ ಕಾಡಿನಲ್ಲಿ ಕನಿಷ್ಠ ಮೂರು ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರು ಭಾರತದೊಳಗೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ಗಮಿಸಿದ ಭಾರತೀಯ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯೋಧರೊಬ್ಬರು ಗಾಯಗೊಂಡಿದ್ದು, ಭಯೋತ್ಪಾದಕರು ಹತ್ತಿರದ ದಟ್ಟ ಅರಣ್ಯದಲ್ಲಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. 

ಈ ಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ರವಾನಿಸಲಾಗಿದ್ದು, ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.ಶುಕ್ರವಾರ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಒಳ ನಸುಳುಕೋರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದರು.  ಸ್ಥಳದಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಮಾದಕ ದ್ರವ್ಯಗಳಂತಹ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com