ಇಂಡೋ-ಪಾಕ್ ಗಡಿಯಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಭಾರತ-ಪಾಕ್ ಗಡಿ ಬಳಿ 10 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಪಡೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ
ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್
ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ಜೈಪುರ: ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಭಾರತ-ಪಾಕ್ ಗಡಿ ಬಳಿ 10 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಪಡೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬಿಎಸ್ಎಫ್ ಯೋಧರು ಶುಕ್ರವಾರ ರಾತ್ರಿ ಗಸ್ತು ತಿರುಗುತ್ತಿದ್ದಾಗ ಜಿಲ್ಲೆಯ ಘರ್ಸಾನಾ ಗಡಿ ಪ್ರದೇಶದಲ್ಲಿ ಡ್ರೋನ್ ಹಾರುತ್ತಿರುವುದು ಕಂಡುಬಂದಿದೆ.

ತಕ್ಷಣ ಬಿಎಸ್ಎಫ್ ಯೋಧರು ಡ್ರೋನ್‌ ಮೇಲೆ ಮನಬಂದಂತೆ ಗುಂಡು ಹಾರಿಸಿದರು ಮತ್ತು ಅದು ಪತನಗೊಂಡಿದೆ ಎಂದು ಬಿಎಸ್‌ಎಫ್ ಡಿಐಜಿ ಪುಷ್ಪೇಂದ್ರ ಸಿಂಗ್ ರಾಥೋಡ್ ತಿಳಿಸಿದ್ದಾರೆ.

ಎರಡು ಹೆರಾಯಿನ್ ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಕಳ್ಳಸಾಗಣೆದಾರರು ರಾತ್ರಿ ಪಾರ್ಸೆಲ್ ಸ್ವೀಕರಿಸಲು ಬಂದಿದ್ದರು ಮತ್ತು ಕತ್ತಲೆಯಲ್ಲಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ರಾಥೋಡ್ ಹೇಳಿದರು.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಶಂಕಿತರನ್ನು ಹುಡುಕಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com