ಪ್ರತಿಕೂಲ ಹವಾಮಾನ: ಪಾಕ್ ವಾಯು ಪ್ರದೇಶ ಪ್ರವೇಶಿಸಿದ ಇಂಡಿಗೋ ವಿಮಾನ

ಪ್ರತಿಕೂಲ ಹವಾಮಾನದಿಂದಾಗಿ ಶ್ರೀನಗರ-ಜಮ್ಮು ಇಂಡಿಗೋ ವಿಮಾನ ಭಾನುವಾರ ಪಾಕಿಸ್ತಾನದ ವಾಯು ಪ್ರದೇಶವನ್ನು ಪ್ರವೇಶಿಸಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. 
ಇಂಡಿಗೋ ವಿಮಾನ
ಇಂಡಿಗೋ ವಿಮಾನ

ಶ್ರೀನಗರ: ಪ್ರತಿಕೂಲ ಹವಾಮಾನದಿಂದಾಗಿ ಶ್ರೀನಗರ-ಜಮ್ಮು ಇಂಡಿಗೋ ವಿಮಾನ ಭಾನುವಾರ ಪಾಕಿಸ್ತಾನದ ವಾಯು ಪ್ರದೇಶವನ್ನು ಪ್ರವೇಶಿಸಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. 

"ಇಂಡಿಗೋ 6e-2124 ವಿಮಾನ ಪ್ರತಿಕೂಲ ಹವಾಮಾನದಿಂದಾಗಿ ಸ್ವಲ್ಪ ಸಮಯದವರೆಗೆ ಪಾಕಿಸ್ತಾನ ವಾಯು ಪ್ರದೇಶವನ್ನು ಪ್ರವೇಶಿಸಿತ್ತು. ನಂತರ ವಿಮಾನವನ್ನು ಅಮೃತಸರಕ್ಕೆ ತಿರುಗಿಸಲಾಯಿತು" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಡಿಗೋ ವಿಮಾನವು ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಎರಡೂ ದೇಶಗಳ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ವಿಮಾನದ ಮಾರ್ಗ ಬದಲಾವಣೆಯನ್ನು ಜಮ್ಮು ಮತ್ತು ಲಾಹೋರ್ ಎಟಿಸಿಗಳು ಉತ್ತಮವಾಗಿ ನಿರ್ವಹಿಸಿದ್ದರಿಂದ ವಿಮಾನ ಸುರಕ್ಷಿತವಾಗಿ ಅಮೃತಸರದಲ್ಲಿ ಲ್ಯಾಂಡ್ ಆಗಿದೆ ಎಂದು ಏರ್‌ಲೈನ್ಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಮಾನವು ಜಮ್ಮು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಕೆಟ್ಟ ಪ್ರತಿಕೂಲ ಹವಾಮಾನದ ಕಾರಣ ವಿಮಾನವನ್ನು ಅಮೃತಸರಕ್ಕೆ ಡೈವರ್ಟ್ ಮಾಡಲಾಗಿದೆ.

ಈ ತಿಂಗಳ ಆರಂಭದಲ್ಲಿ ಇದೇ ರೀತಿಯ ಘಟನೆಯಲ್ಲಿ ಇಂಡಿಗೋ ಅಮೃತಸರ-ಅಹಮದಾಬಾದ್ ವಿಮಾನವು ಕೆಟ್ಟ ಹವಾಮಾನದಿಂದಾಗಿ ಪಾಕಿಸ್ತಾನ ವಾಯುಪ್ರದೇಶವನ್ನು ಪ್ರವೇಶಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com