ದೇಶ

ಛತ್ತೀಸ್‌ಗಢ: ಅಪಘಾತದಲ್ಲಿ ಜನಪ್ರಿಯ ಯೂಟ್ಯೂಬರ್ ದೇವರಾಜ್ ಪಟೇಲ್ ಸಾವು

ಛತ್ತೀಸ್‌ಗಢ: ಅಪಘಾತದಲ್ಲಿ ಜನಪ್ರಿಯ ಯೂಟ್ಯೂಬರ್ ದೇವರಾಜ್ ಪಟೇಲ್ ಸಾವು
ದೇವರಾಜ್ ಪಟೇಲ್
Published On :

ರಾಯಪುರ: ಜನಪ್ರಿಯ ಯೂಟ್ಯೂಬರ್ ದೇವರಾಜ್ ಪಟೇಲ್ ಅವರು ಸೋಮವಾರ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಛತ್ತೀಸ್‌ಗಢ ಮೂಲದ 22 ವರ್ಷದ ಪಟೇಲ್ ಅವರು ತೆರಳುತ್ತಿದ್ದ ಬೈಕ್ ಗೆ ಟ್ರಕ್‌ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯೂಟ್ಯೂಬರ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ದೇವರಾಜ್ ಪಟೇಲ್ ಅವರು ಇಂದು ಮಧ್ಯಾಹ್ನ 3.30ರ ಸುಮಾರಿಗೆ ವಿಡಿಯೋ ಚಿತ್ರೀಕರಣ ಮುಗಿಸಿಕೊಂಡು ನವ ರಾಯಪುರದಿಂದ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವರಾಜ್ ಪಟೇಲ್ ಅವರು ತಮ್ಮ ಯೂಟ್ಯೂಬ್ ಚಾನೆಲ್ 'ದಿಲ್ ಸೆ ಬುರಾ ಲಗ್ತಾ ಹೈ' ಮೂಲಕ ಖ್ಯಾತಿ ಗಳಿಸಿದ್ದರು ಮತ್ತು 4 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿದ್ದರು.

ದೇವರಾಜ್ ಪಟೇಲ್ ನಿಧನಕ್ಕೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.