ಮಾಜಿ ಸಂಸದ ಸೇರಿದಂತೆ 35 ಬಿಆರ್‌ಎಸ್ ನಾಯಕರು ಕಾಂಗ್ರೆಸ್ ಸೇರಲು ನಿರ್ಧಾರ

ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಸೇರಿದಂತೆ ಭಾರತ ರಾಷ್ಟ್ರ ಸಮಿತಿ(ಬಿಆರ್ ಎಸ್)ನ 35 ನಾಯಕರು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ ಮತ್ತು...
ಖರ್ಗೆ, ರಾಹುಲ್ ಭೇಟಿ ಮಾಡಿದ ಬಿಆರ್ ಎಸ್ ನಾಯಕರು
ಖರ್ಗೆ, ರಾಹುಲ್ ಭೇಟಿ ಮಾಡಿದ ಬಿಆರ್ ಎಸ್ ನಾಯಕರು

ನವದೆಹಲಿ: ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಸೇರಿದಂತೆ ಭಾರತ ರಾಷ್ಟ್ರ ಸಮಿತಿ(ಬಿಆರ್ ಎಸ್)ನ 35 ನಾಯಕರು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ ಮತ್ತು ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
  
ಜುಲೈ ಮೊದಲ ವಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ತೆಲಂಗಾಣದ ಖಮ್ಮಮ್‌ನಲ್ಲಿ ನಡೆಯಲಿರುವ ಸಾರ್ವಜನಿಕ ರ್ಯಾಲಿಯಲ್ಲಿ ಬಿಆರ್ ಎಸ್ ನಾಯಕರು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ. ರೆಡ್ಡಿ ಅವರು ಈ ಹಿಂದೆ ಖಮ್ಮಂನ ಬಿಆರ್‌ಎಸ್ ಸಂಸದರಾಗಿದ್ದರು.

ಈ ವರ್ಷಾಂತ್ಯದಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದೆ.

ಬಿಆರ್ ಎಸ್ ನಾಯಕರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆಸಿ ವೇಣುಗೋಪಾಲ್ ಮತ್ತು ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com