ಏರ್ ಇಂಡಿಯಾ ವಿಮಾನದಲ್ಲಿ ಸೀಟ್‌ನಲ್ಲೇ ಮಲ, ಮೂತ್ರ ಮಾಡಿದ ಪ್ರಯಾಣಿಕನ ಬಂಧನ

ಮುಂಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಮಾನದಲ್ಲಿ ಸೀಟ್‌ನಲ್ಲೇ ಮಲ ಮತ್ತು ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಸೋಮವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮುಂಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಮಾನದಲ್ಲಿ ಸೀಟ್‌ನಲ್ಲೇ ಮಲ ಮತ್ತು ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ಐಜಿಐ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ವಿಮಾನದ ಕ್ಯಾಪ್ಟನ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ಜೂನ್ 24 ರಂದು ಮುಂಬೈನಿಂದ ದೆಹಲಿಗೆ ಏರ್ ಇಂಡಿಯಾ ಫ್ಲೈಟ್ ಎಐಸಿ 866 ರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಸೀಟ್ ನಂ. 17F ನಲ್ಲಿ ಮಲ, ಮೂತ್ರ ವಿಸರ್ಜನೆ ಮತ್ತು ಉಗುಳಿದ್ದಾರೆ ಎಂದು ಆರೋಪಿಸಲಾಗಿದೆ.

ಈ ದುಷ್ಕೃತ್ಯವನ್ನು ಕ್ಯಾಬಿನ್ ಸಿಬ್ಬಂದಿ ಗುರುತಿಸಿದ್ದು, ನಂತರ, ವಿಮಾನದ ಕ್ಯಾಬಿನ್ ಮೇಲ್ವಿಚಾರಕರಿಂದ ಮೌಖಿಕ ಎಚ್ಚರಿಕೆ ನೀಡಲಾಗಿದೆ. ಬಳಿಕ ಫ್ಲೈಟ್ ಕ್ಯಾಪ್ಟನ್‌ಗೂ ದುರ್ವರ್ತನೆ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಎಫ್‌ಐಆರ್ ನಲ್ಲಿ ತಿಳಿಸಲಾಗಿದೆ. 

ಇದಲ್ಲದೆ, ಘಟನೆಯ ನಂತರ ದಾಖಲಾದ ಎಫ್‌ಐಆರ್ ಪ್ರಕಾರ, ತಕ್ಷಣವೇ ಕಂಪನಿಗೆ ಸಂದೇಶವನ್ನು ಕಳುಹಿಸಲಾಗಿದೆ ಮತ್ತು ಆಗಮನದ ನಂತರ ಪ್ರಯಾಣಿಕರನ್ನು ಹಿಡಿದಿಡಲು ವಿಮಾನ ನಿಲ್ದಾಣದ ಭದ್ರತೆಯನ್ನು ಕೋರಲಾಗಿತ್ತು. ಎಫ್‌ಐಆರ್‌ನ ಮಾಹಿತಿಯ ಪ್ರಕಾರ, ಸಹ ಪ್ರಯಾಣಿಕರು ಕೂಡ ವ್ಯಕ್ತಿಯ ವರ್ತನೆಯ ಬಗ್ಗೆ ಕಿಡಿಕಾರಿದ್ದಾರೆ.

ವಿಮಾನ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆ ಏರ್ ಇಂಡಿಯಾದ ಭದ್ರತಾ ಮುಖ್ಯಸ್ಥರು ಹಾಜರಾಗಿ ಆರೋಪಿ ಪ್ರಯಾಣಿಕನನ್ನು ಐಜಿಐ ಏರ್‌ಪೋರ್ಟ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಆರೋಪಿಯಾಗಿರುವ ಪ್ರಯಾಣಿಕ ಆಫ್ರಿಕಾದಲ್ಲಿ ಅಡುಗೆ ಕೆಲಸದಲ್ಲಿದ್ದಾನೆ ಎನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com