ಹರಿಯಾಣ: ಗ್ರಾಮವೊಂದರಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ, ಎಫ್‌ಐಆರ್ ದಾಖಲು

ಗ್ರಾಮವೊಂದರಲ್ಲಿ ಕೆಲವು ಕಿಡಿಗೇಡಿಗಳು ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ರಾತ್ರಿ ಭಟ್ಲ ಗ್ರಾಮದ ಡಾ. ಅಂಬೇಡ್ಕರ್ ಪಾರ್ಕ್‌ನಲ್ಲಿರುವ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಹೇಳಿದರು.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಹಿಸ್ಸಾರ್: ಇಲ್ಲಿನ ಗ್ರಾಮವೊಂದರಲ್ಲಿ ಕೆಲವು ಕಿಡಿಗೇಡಿಗಳು ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಭಟ್ಲ ಗ್ರಾಮದ ಡಾ. ಅಂಬೇಡ್ಕರ್ ಪಾರ್ಕ್‌ನಲ್ಲಿರುವ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಹೇಳಿದರು.

ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕೆಲವು ಗ್ರಾಮಸ್ಥರು ಪ್ರತಿಮೆ ಧ್ವಂಸಗೊಳಿಸಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ನಂತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಪ್ರಾರ್ಥನಾ ಸ್ಥಳವನ್ನು ನಾಶಪಡಿಸುವುದು, ಹಾನಿ ಮಾಡುವುದು ಅಥವಾ ಅಪವಿತ್ರಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹನ್ಸಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಘಟನೆಯ ಹಿಂದೆ ಇರುವವರನ್ನು ಪತ್ತೆಹಚ್ಚಲು ಸಮೀಪದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ನೀಡಿದ ಗ್ರಾಮಸ್ಥರು ಆರೋಪಿಗಳನ್ನು ಕೂಡಲೇ ಬಂಧಿಸಿ ಉದ್ಯಾನವನದಲ್ಲಿ ನೂತನ ಪ್ರತಿಮೆ ಸ್ಥಾಪಿಸಬೇಕು. ಅಲ್ಲದೆ, ಉದ್ಯಾನದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com