ಕರ್ನಾಟಕದ ಬೆನ್ನಲ್ಲೇ ದೆಹಲಿ ಜನರಿಗೂ ಶಾಕ್: ವಿದ್ಯುತ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ವಿದ್ಯುತ್ ದರ ಏರಿಕೆಯಾಗಿದ್ದು, ಜನತೆಗೆ ಶಾಕ್ ನೀಡಿದೆ. ಈ ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಎಎಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ವಿದ್ಯುತ್ ದರ ಏರಿಕೆಯಾಗಿದ್ದು, ಜನತೆಗೆ ಶಾಕ್ ನೀಡಿದೆ. ಈ ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಎಎಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು.

ಡಿಸ್ಕಾಂ ವಿಧಿಸುವ ವಿದ್ಯುತ್ ಖರೀದಿ ಹೊಂದಾಣಿಕೆ ವೆಚ್ಚ (ಪಿಪಿಎಸಿ) ಹೆಚ್ಚಳದಿಂದಾಗಿ 200 ಮತ್ತು 600 ಯೂನಿಟ್‌ಗಿಂತ ಹೆಚ್ಚು ಬಳಸುವ ದೆಹಲಿಯ ಬಹುಪಾಲು ದೇಶೀಯ ಗ್ರಾಹಕರ ಮಾಸಿಕ ವಿದ್ಯುತ್ ಬಿಲ್‌ಗಳನ್ನು 265 ರೂ. ವರೆಗೆ ಹೆಚ್ಚಿಸಲಾಗುವುದು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಸೆಂಟ್ರಲ್ ದೆಹಲಿಯ ಎಎಪಿ ಕಚೇರಿಯ ಹೊರಗೆ ಜಮಾಯಿಸಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು, ಗ್ರಾಹಕರಿಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ಎಎಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವೆ ಅತಿಶಿ, ತಿಂಗಳಿಗೆ 200 ಯೂನಿಟ್‌ವರೆಗಿನ ಬಳಕೆಯೊಂದಿಗೆ ಶೂನ್ಯ ಬಿಲ್ ಪಡೆಯುವ ಗ್ರಾಹಕರಿಗೆ ಇದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದಾಗ್ಯೂ, ಸಬ್ಸಿಡಿ ಪಡೆಯದವರು ತಮ್ಮ ಮಾಸಿಕ ಬಿಲ್‌ಗಳಲ್ಲಿ ಸುಮಾರು ಶೇ ಎಂಟರಷ್ಟು ಹೆಚ್ಚು ಪಾವತಿಸಬೇಕಾಗುತ್ತದೆ.
ಡಿಸ್ಕಾಮ್‌ಗಳು ವಿಧಿಸುವ ಪಿಪಿಎಸಿ ಸರ್‌ಚಾರ್ಜ್‌ನಲ್ಲಿ ಹೆಚ್ಚಳವನ್ನು ದೆಹಲಿ ವಿದ್ಯುತ್ ನಿಯಂತ್ರಣ ಆಯೋಗವು ಅನುಮತಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com