ದೆಹಲಿ ದೇಶದ ಎಲೆಕ್ಟ್ರಿಕ್ ವಾಹನಗಳ ರಾಜಧಾನಿ: ಮುಖ್ಯಮಂತ್ರಿ ಕೇಜ್ರಿವಾಲ್

ರಾಷ್ಟ್ರ ರಾಜಧಾನಿಯಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಮೂಲಕ ದೇಶದ ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಮೂಲಕ ದೇಶದ ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ. 42 ಚಾರ್ಜಿಂಗ್ ಸ್ಟೇಷನ್ ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಜ್ರಿವಾಲ್, 2014 ರಿಂದ ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯದ ಮಟ್ಟ ಕಡಿಮೆಯಾಗಿದೆ ಎಂದು ತಿಳಿಸಿದರು.

ಮಾಲಿನ್ಯವನ್ನು ಕಡಿಮೆಗೊಳಿಸಲು ವಿದ್ಯುತ್ ಚಾಲಿತ ವಾಹನಗಳ ಉತ್ತೇಜನಕ್ಕೆ ಆರಂಭಿಸಿದೇವು. 2020ರಲ್ಲಿ ವಿದುಯ್ತ್ ವಾಹನಗಳಿಗಾಗಿ ನೀತಿಯೊಂದನ್ನು ರೂಪಿಸಿದೇವು ಮತ್ತು  2025 ರ ವೇಳೆಗೆ ದೆಹಲಿಯಲ್ಲಿ ಖರೀದಿಸಿದ ಎಲ್ಲಾ ವಾಹನಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು ಎಲೆಕ್ಟ್ರಿಕ್ ಆಗಿರುವ ಗುರಿ ಹೊಂದಿದ್ದೇವೆ ಎಂದರು. 

ದೆಹಲಿಯನ್ನು ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ 2020ರಲ್ಲಿ ದೆಹಲಿ ವಿದ್ಯುತ್ ಚಾಲಿತ ನೀತಿಯನ್ನು ಅನುಷ್ಟಾನಗೊಳಿಸಲಾಗಿತ್ತು. ರಾಷ್ಟ್ರ ರಾಜಧಾನಿಯಲ್ಲಿ ಖರೀದಿಸಿದ ಎಲ್ಲಾ ವಾಹನಗಳಲ್ಲಿ ಶೇಕಡಾ 13 ರಷ್ಟು ಎಲೆಕ್ಟ್ರಿಕ್ ವಾಹನಗಳು ಎಂಬುದನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಆಗಸ್ಟ್ 2020 ರಿಂದ 1. 28 ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲಾಗಿದೆ. ನೀತಿ ಆಯೋಗ ಕೂಡಾ ದೆಹಲಿ ಎಲೆಕ್ಟ್ರಿಕ್ ವಾಹನಗಳ ನೀತಿಯನ್ನು ಶ್ಲಾಘಿಸಿದೆ ಎಂದು ಅವರು ಹೇಳಿದರು.

ಚಾರ್ಜಿಂಗ್ ಸ್ಟೇಷನ್‌ಗಳಲ್ಲಿ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತಿದ್ದು, ಜನರು ನಮ್ಮನ್ನು ಬೆಂಬಲಿಸಿದ್ದಾರೆ. ಅದೊಂದು ಜನಾಂದೋಲನವಾಗಿ ಮಾರ್ಪಟ್ಟಿದೆ. ದೇಶದಾದ್ಯಂತ ಅತಿ ಹೆಚ್ಚು ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿದ್ದೇವೆ. ದೇಶಾದ್ಯಂತ ಮೂರನೇ ಒಂದು ಭಾಗದಷ್ಟು ಚಾರ್ಜಿಂಗ್ ಸ್ಟೇಷನ್‌ಗಳು ದೆಹಲಿಯಲ್ಲಿವೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com