ಭದ್ರತಾ ಪಡೆಗಳ ಚಿತ್ರ
ದೇಶ
ಜಮ್ಮು-ಕಾಶ್ಮೀರ: ಕುಲ್ಗಾಂ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನ ಹತ್ಯೆ, ಶೋಧ ಕಾರ್ಯಾಚರಣೆ ಮುಂದುವರಿಕೆ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಕಾರ್ಯಾಚರಣೆ ವೇಳೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ.
ಕಳೆದ ಶುಕ್ರವಾರ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಒಳ ನಸುಳುಕೋರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದರು. ಸ್ಥಳದಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಮಾದಕ ದ್ರವ್ಯಗಳಂತಹ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.

