ನವದೆಹಲಿ ವಿಮಾನ ನಿಲ್ದಾಣ: ನಕಲಿ ಕಸ್ಟಮ್ಸ್ ಅಧಿಕಾರಿಗಳಿಂದ ಪ್ರಯಾಣಿನಿಗೆ ವಂಚನೆ

ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಎಂದು ಹೇಳಿಕೊಂಡ ಇಬ್ಬರು ವ್ಯಕ್ತಿಗಳು, ಸೌದಿ ಅರೇಬಿಯಾದಿಂದ ಬರುತ್ತಿದ್ದ ಪ್ರಯಾಣಿಕರೊಬ್ಬರಿಗೆ ರಿಯಾಲ್ 19,000 (ರೂ. 4.15 ಲಕ್ಷ) ವಂಚಿಸಿದ್ದಾರೆ.
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ನವದೆಹಲಿ: ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಎಂದು ಹೇಳಿಕೊಂಡ ಇಬ್ಬರು ವ್ಯಕ್ತಿಗಳು, ಸೌದಿ ಅರೇಬಿಯಾದಿಂದ ಬರುತ್ತಿದ್ದ ಪ್ರಯಾಣಿಕರೊಬ್ಬರಿಗೆ ರಿಯಾಲ್ 19,000 (ರೂ. 4.15 ಲಕ್ಷ) ವಂಚಿಸಿದ್ದಾರೆ.

ಆರೋಪಿಗಳು ನಕಲಿ ಕಸ್ಟಮ್ಸ್ ಅಧಿಕಾರಿಗಳಂತೆ ನಟಿಸಿ ತಮ್ಮ ಕಾರಿನಲ್ಲಿ ಪ್ರಯಾಣಿಕನನ್ನು ವಿಮಾನ ನಿಲ್ದಾಣದಿಂದ ಕರೆದೊಯ್ದಿದ್ದಾರೆ. ನಂತರ ದಾರಿ ಮಧ್ಯೆ ಅವರನ್ನು ಬೆದರಿಸಿ 19,000 ರಿಯಾಲ್‌ಗಳು ಮತ್ತು ಕೆಲವೊಂದು ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಹಣ ಕಳೆದುಕೊಂಡಿರುವ ಮೊಹಮ್ಮದ್ ಸುಲೇಮಾನ್, ಕಳೆದ ಎರಡು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ವಾಸಿಸುತ್ತಿದ್ದು, ಕೂಲಿ ಕೆಲಸ ಮಾಡುತ್ತಿದ್ದರು ಎಂದು ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ದಾಖಲಾದ ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಸುಲೇಮಾನ್ ಭಾನುವಾರ  ಸೌದಿ ಅರೇಬಿಯಾದ ರಿಯಾದ್‌ನಿಂದ ಫ್ಲೈನಾಸ್ ಏರ್‌ಲೈನ್ಸ್‌ನಲ್ಲಿ ದೆಹಲಿಗೆ ಬಂದಿದ್ದರು. ಸೋಮವಾರ ಮುಂಜಾನೆ 3.30ರ ಸುಮಾರಿಗೆ ವಿಮಾನ ಲ್ಯಾಂಡ್ ಆಗಿತ್ತು. ಮುಂಜಾನೆ 4 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಿಂದ ಲಿಫ್ಟ್ ನಿಂದ ಹೊರ ಬಂದ ತಕ್ಷಣ ಅಲ್ಲಿಗೆ ಬಂದ ಇಬ್ಬರು ಕಸ್ಟಮ್ಸ್ ಇಲಾಖೆಯವರು ಎಂದು ಹೇಳಿ, ತನ್ನ ಪಾಸ್ ಪೋರ್ಟ್ ವಶಕ್ಕೆ ಪಡೆದು ದೆಹಲಿಯ ಮಹಿಪಾಲ್‌ಪುರ ಗ್ರಾಮಕ್ಕೆ ಕರೆದುಕೊಂಡು ಹೋದರು ಎಂದು ವಂಚನೆಗೊಳಗಾದವರು ಆರೋಪಿಸಿದ್ದಾರೆ.

ಈ ಸಂಬಂಧ ಇಂದಿರಾ ಗಾಂಧಿ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 420 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com