ರಾಹುಲ್ ಗಾಂಧಿ
ದೇಶ
ಜೂನ್ 29-30 ರಂದು ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ 29-30 ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ಜನರನ್ನು ಭೇಟಿ ಮಾಡುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ 29-30 ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ಜನರನ್ನು ಭೇಟಿ ಮಾಡುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಂಗಳವಾರ ತಿಳಿಸಿದ್ದಾರೆ.
ಮೇ 3 ರಿಂದ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಈಶಾನ್ಯ ರಾಜ್ಯಕ್ಕೆ ಕಾಂಗ್ರೆಸ್ ನಾಯಕರ ಮೊದಲ ಭೇಟಿ ಇದಾಗಿದೆ
"ರಾಹುಲ್ ಗಾಂಧಿ ಅವರು ಜೂನ್ 29-30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಮಣಿಪುರ ಭೇಟಿಯ ಸಮಯದಲ್ಲಿ ಇಂಫಾಲ್ ಮತ್ತು ಚುರಚಂದಪುರದ ಪರಿಹಾರ ಶಿಬಿರಗಳಿಗೆ ಭೇಟಿ ನೀಡುತ್ತಾರೆ ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ" ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ(ಸಂಘಟನೆ) ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.
ಮಣಿಪುರವು ಸುಮಾರು ಎರಡು ತಿಂಗಳಿನಿಂದ ಹೊತ್ತಿ ಉರಿಯುತ್ತಿದೆ ಮತ್ತು ಸಮಾಜವು ಸಂಘರ್ಷದಿಂದ ಶಾಂತಿಯತ್ತ ಸಾಗಲು ಸಂತೈಸುವ ಸ್ಪರ್ಶದ ಅಗತ್ಯವಿದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ