ಛತ್ತೀಸ್‌ಗಢ ಉಪ ಮುಖ್ಯಮಂತ್ರಿಯಾಗಿ ಬಂಡಾಯ ಸಚಿವ ಸಿಂಗ್ ದೇವ್ ನೇಮಕ

ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ರಾಜಕೀಯ ಪ್ರತಿಸ್ಪರ್ಧಿ, ಬಂಡಾಯ ಸಚಿವ ಟಿಎಸ್ ಸಿಂಗ್ ದೇವ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಬುಧವಾರ ನೇಮಕ
ಸಿಂಗ್ ದೇವ್
ಸಿಂಗ್ ದೇವ್

ನವದೆಹಲಿ: ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ರಾಜಕೀಯ ಪ್ರತಿಸ್ಪರ್ಧಿ, ಬಂಡಾಯ ಸಚಿವ ಟಿಎಸ್ ಸಿಂಗ್ ದೇವ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಬುಧವಾರ ನೇಮಕ ಮಾಡಿದೆ.

ಇಂದು ಬಿಡುಗಡೆ ಮಾಡಿದ ಪಕ್ಷದ ಹೇಳಿಕೆಯ ಪ್ರಕಾರ, ಛತ್ತೀಸ್‌ಗಢದ ಉಪ ಮುಖ್ಯಮಂತ್ರಿಯಾಗಿ ಸಿಂಗ್ ದೇವ್ ಅವರನ್ನು ನೇಮಿಸುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ.

2018 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಸಿಂಗ್ ದೇವ್ ಮತ್ತು ಮುಖ್ಯಮಂತ್ರಿ ಭೂಪೇಶ್ ಬಘೇಲ್ ನಡುವೆ ನಾಯಕತ್ವಕ್ಕಾಗಿ ಜಗಳ ನಡೆಯುತ್ತಿದೆ.

ಛತ್ತೀಸ್‌ಗಢದ ಉಪ ಮುಖ್ಯಮಂತ್ರಿಯಾಗಿ ಸಿಂಗ್ ದೇವ್ ಅವರನ್ನು ನೇಮಿಸುವ ಪ್ರಸ್ತಾವನೆಯನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ. ಡಿಸಿಎಂ ಆಗಿ ದೇವ್ ಅವರ ಸೇವೆಯಿಂದ ರಾಜ್ಯವು ಹೆಚ್ಚು ಪ್ರಯೋಜನೆ ಪಡೆಯುತ್ತದೆ ಎಂದು ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com