ಸ್ಕೂಟರ್ ನಲ್ಲಿ 7 ಮಕ್ಕಳನ್ನು ಕರೆದೊಯ್ಯುತ್ತಿರುವ  ವ್ಯಕ್ತಿ
ಸ್ಕೂಟರ್ ನಲ್ಲಿ 7 ಮಕ್ಕಳನ್ನು ಕರೆದೊಯ್ಯುತ್ತಿರುವ ವ್ಯಕ್ತಿ

ಮುಂಬೈ: ಸ್ಕೂಟರ್ ನಲ್ಲಿ 7 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ವಿರುದ್ಧ ಹತ್ಯೆ ಯತ್ನ ಕೇಸ್ ದಾಖಲು!

ಸ್ಕೂಟರ್ ನಲ್ಲಿ 7 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯ ವಿರುದ್ಧ ಹತ್ಯೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ. 
Published on

ಮುಂಬೈ: ಸ್ಕೂಟರ್ ನಲ್ಲಿ 7 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯ ವಿರುದ್ಧ ಹತ್ಯೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ. 

ಮುಂಬೈ ನಲ್ಲಿ ಈ ಘಟನೆ ವರದಿಯಾಗಿದ್ದು, ನರಹತ್ಯೆ ಮಾಡಲು ಯತ್ನಿಸುತ್ತಿದ್ದ ಆರೋಪ ಹೊರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
 
ಜೂ.23 ರಂದು 40 ವರ್ಷ ವಯಸ್ಸಿನ ವ್ಯಕ್ತಿ ಮುಂಬೈ ಸೆಂಟ್ರಲ್ ಬ್ರಿಡ್ಜ್ ಬಳಿ 7 ಮಂದಿಯನ್ನು ಸ್ಕೂಟರ್ ನಲ್ಲಿ ಕರೆದೊಯ್ಯುತ್ತಿದ್ದರು. 

ಆರೋಪಿ ವ್ಯಕ್ತಿ ತೆಂಗಿನಕಾಯಿ ವ್ಯಾಪಾರಿಯಾಗಿದ್ದು, ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ಆತನನ್ನು ಪೊಲೀಸರು ತಡೆದಿದ್ದರು. ವಾಹನ ಸವಾರನ ವಿರುದ್ಧ ಐಪಿಸಿ ಸೆಕ್ಷನ್ 308 ಹಾಗೂ ಮೋಟಾರು ವಾಹನ ಕಾಯ್ದೆಯಡಿಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. 

ಸ್ಕೂಟರ್ ನಲ್ಲಿದ್ದ ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ತಲುಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com