ಮಹಾರಾಷ್ಟ್ರ: ಕಾರು-ಜೀಪ್ ಡಿಕ್ಕಿಯಾಗಿ ನಾಲ್ವರು ಸಾವು, 9 ಮಂದಿಗೆ ಗಾಯ

ಉತ್ತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಶುಕ್ರವಾರ ಸಂಜೆ ಕಾರು ಮತ್ತು ಜೀಪ್‌ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನಾಸಿಕ್: ಉತ್ತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಶುಕ್ರವಾರ ಸಂಜೆ ಕಾರು ಮತ್ತು ಜೀಪ್‌ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಣಿ-ಸಪುತಾರಾ ಹೆದ್ದಾರಿಯ ಖೋರಿ ಫಾಟಾ ಬಳಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರು ಸಪುತಾರಾ ಕಡೆಯಿಂದ ವಾಣಿ ಕಡೆಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬರುತ್ತಿದ್ದ ಜೀಪ್ ಗೆ ಡಿಕ್ಕಿ ಹೊಡೆದಿದೆ.

ಗಾಯಗೊಂಡವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಮೃತರೆಲ್ಲರೂ ಕಾರಿನ ಪ್ರಯಾಣಿಕರಾಗಿದ್ದು, ವಿನಾಯಕ್ ಗೋವಿಂದ್ ಕ್ಷೀರಸಾಗರ್(37), ಯೋಗೇಶ್ ದಿಲೀಪ್ ವಾಘ್ (18), ಜತಿನ್ ಅನಿಲ್ ಫಾವ್ಡೆ(23) ಮತ್ತು ರವೀಂದ್ರ ಮೋತಿರಾಮ್ ಚವ್ಹಾಣ್ (22) ಎಂದು ಗುರುತಿಸಲಾಗಿದೆ. ಎಲ್ಲರೂ ವಾಣಿ, ಮೋತಾ ಕೋಳಿವಾಡ ನಿವಾಸಿಗಳಾಗಿದ್ದಾರೆ.

ಗಾಯಾಳುಗಳನ್ನು ನಾಸಿಕ್ ಜಿಲ್ಲಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com