ಸೇನೆಯಿಂದ ಚೀನಾ, ಪಾಕ್ ಗಡಿ ಭಾಗಗಳಿಗೆ 307 ಹೊವಿಟ್ಜರ್ ಗಳ ಖರೀದಿ

ರಕ್ಷಣಾ ಕ್ಷೇತ್ರದಲ್ಲಿ ಮೇಕ್ ಇನ್ ಇಂಡಿಯಾದತ್ತ ದೃಢವಾದ ಹೆಜ್ಜೆ ಇರಿಸಲು ಚೀನಾ, ಪಾಕಿಸ್ತಾನ ಗಡಿಗಳಿಗೆ ನಿಯೋಜಿಸಲು ರಕ್ಷಣಾ ಸಚಿವಾಲಯ ಭಾರತೀಯ ಸೇನೆಯಿಂದ 307 ಅತ್ಯಾಧುನಿಕ ಟೋವ್ಡ್ ಆರ್ಟಿಲರಿ ಗನ್ ಸಿಸ್ಟಮ್ಸ್ ಗಳ ಖರೀದಿಗೆ ಪ್ರಸ್ತಾವನೆ ಬಂದಿದೆ
ಹೊವಿಟ್ಜರ್  (ಸಾಂಕೇತಿಕ ಚಿತ್ರ)
ಹೊವಿಟ್ಜರ್ (ಸಾಂಕೇತಿಕ ಚಿತ್ರ)
Updated on: 

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಮೇಕ್ ಇನ್ ಇಂಡಿಯಾದತ್ತ ದೃಢವಾದ ಹೆಜ್ಜೆ ಇರಿಸಲು ಚೀನಾ, ಪಾಕಿಸ್ತಾನ ಗಡಿಗಳಿಗೆ ನಿಯೋಜಿಸಲು ರಕ್ಷಣಾ ಸಚಿವಾಲಯ ಭಾರತೀಯ ಸೇನೆಯಿಂದ 307 ಅತ್ಯಾಧುನಿಕ ಟೋವ್ಡ್ ಆರ್ಟಿಲರಿ ಗನ್ ಸಿಸ್ಟಮ್ಸ್ ಗಳ ಖರೀದಿಗೆ ಪ್ರಸ್ತಾವನೆ ಬಂದಿದೆ.

ಈ ಪ್ರಸ್ತಾವನೆ 1 ಬಿಲಿಯನ್ ಡಾಲರ್ ಮೌಲ್ಯದ್ದಾಗಿದ್ದು, ಸಂಪುಟ ಸಮಿತಿ ಅನುಮೋದನೆಗೆ ಕಳಿಸಲಾಗಿದೆ. ಇದು ದೇಶಿಯವಾಗಿ ತಯಾರಾಗಲಿರುವ ಹೊವಿಟ್ಜರ್ ಗಳ ಮೊದಲ ಖರೀದಿಯಾಗಿರಲಿದ್ದು, 50 ಕೀ.ಮೀ ವ್ಯಾಪ್ತಿ ವರೆಗಿನ ಟಾರ್ಗೆಟ್ ಗಳನ್ನು ತಲುಪುವ ಸಾಮರ್ಥ್ಯವನ್ನು ಹೊಂದಿರಲಿದೆ.
 
ಈ ಗನ್ ಗಳ ಪರೀಕ್ಷಾರ್ಥ ಪ್ರಯೋಗವನ್ನು ಸೇನಾಪಡೆಗಳು ಈಗಾಗಲೇ ಮುಕ್ತಾಯಗೊಳಿಸಿವೆ. ಬಳಕೆದಾರರ ಸಲಹೆ-ಸೂಚನೆಗಳನ್ನಾಧರಿಸಿ ಈ ಗನ್ ಗಳನ್ನು ಮೇಲ್ದರ್ಜೆಗೇರಿಸಲಾಗಿದೆ.

ಹೊವಿಟ್ಜರ್‌ನ ತಂತ್ರಜ್ಞಾನವನ್ನು ಎರಡು ಖಾಸಗಿ ಸಂಸ್ಥೆಗಳಾದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಮತ್ತು ಭಾರತ್ ಫೋರ್ಜ್ ಗ್ರೂಪ್‌ನೊಂದಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹಂಚಿಕೊಂಡಿದೆ ಮತ್ತು ಈ ಸಂಸ್ಥೆಗಳು 320 ಕ್ಕೂ ಹೆಚ್ಚು ಹೈ ಮೊಬಿಲಿಟಿ ವಾಹನಗಳು ಸೇರಿದಂತೆ ಪಡೆಗಳಿಗೆ ವ್ಯವಸ್ಥೆಯನ್ನು ಪೂರೈಸುತ್ತವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com