2021-22ರಲ್ಲಿ ಬಿಜೆಪಿಗೆ ಹರಿದು ಬಂದು 1917 ಕೋಟಿ ರೂ. ಆದಾಯ, ಕಾಂಗ್ರೆಸ್ ಗೆ ಕೇವಲ 541 ಕೋಟಿ!

2021-22ನೇ ಸಾಲಿನ ಆರ್ಥಿಕ ವರ್ಷದಲ್ಲಿ ಎಂಟು ಮಾನ್ಯತೆ ಪಡೆದ ರಾಷ್ಟ್ರೀಯ ಪಕ್ಷಗಳಿಗೆ ಭಾರತದಾದ್ಯಂತ ಒಟ್ಟು 3289.34 ಕೋಟಿ ರೂಪಾಯಿ ಸಂಗ್ರಹಿಸಿರುವುದಾಗಿ ಘೋಷಿಸಿಕೊಂಡಿವೆ.
ಬಿಜೆಪಿ-ಕಾಂಗ್ರೆಸ್
ಬಿಜೆಪಿ-ಕಾಂಗ್ರೆಸ್

ನವದೆಹಲಿ: 2021-22ನೇ ಸಾಲಿನ ಆರ್ಥಿಕ ವರ್ಷದಲ್ಲಿ ಎಂಟು ಮಾನ್ಯತೆ ಪಡೆದ ರಾಷ್ಟ್ರೀಯ ಪಕ್ಷಗಳಿಗೆ ಭಾರತದಾದ್ಯಂತ ಒಟ್ಟು 3289.34 ಕೋಟಿ ರೂಪಾಯಿ ಸಂಗ್ರಹಿಸಿರುವುದಾಗಿ ಘೋಷಿಸಿಕೊಂಡಿವೆ.

ಎಂಟು ಪಕ್ಷಗಳ ಒಟ್ಟು ಆದಾಯದಲ್ಲಿ ಆಡಳಿತರೂಢ ಭಾರತೀಯ ಜನತಾ ಪಕ್ಷ  ಅರ್ಧಕ್ಕಿಂತ ಹೆಚ್ಚು ಹಣ ಸಂಗ್ರಹಿಸಿರುವುದಾಗಿ ಎಂದು ಚುನಾವಣಾ ಸುಧಾರಣೆಗಳಿಗಾಗಿ ಕೆಲಸ ಮಾಡುವ ಪ್ರಮುಖ ಎನ್‌ಜಿಒ ತಿಳಿಸಿದೆ.

545.745 ಕೋಟಿ ರೂ.ಗಳ ಸಂಗ್ರಹಿಸಿರುವ ತೃಣಮೂಲ ಕಾಂಗ್ರೆಸ್ ಎರಡನೇ ಅತಿ ಹೆಚ್ಚು ಆದಾಯ ಗಳಿಸಿದ ಪಕ್ಷ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬುಧವಾರ ತಿಳಿಸಿದೆ.

ಚುನಾವಣಾ ಆಯೋಗಕ್ಕೆ ರಾಜಕೀಯ ಪಕ್ಷಗಳು ಹಂಚಿಕೊಂಡ ದಾಖಲೆಗಳನ್ನು ಉಲ್ಲೇಖಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಮಾಡಿದ್ದು, 2021-22ರ ಅವಧಿಯಲ್ಲಿ ಬಿಜೆಪಿ ಒಟ್ಟು ರೂ 1917.12 ಕೋಟಿ ಆದಾಯನ್ನು ಘೋಷಿಸಿಕೊಂಡಿದೆ ಮತ್ತು ಈ ಪೈಕಿ 854.467 ಕೋಟಿ ಖರ್ಚು ಮಾಡಿದೆ.

ಕಾಂಗ್ರೆಸ್‌ನ ಒಟ್ಟು ಆದಾಯ 541.275 ಕೋಟಿ ರೂ.ಗಳಾಗಿದ್ದು, 400.414 ಕೋಟಿ ರೂ. ಅಥವಾ ಅದರ ಆದಾಯದ ಶೇಕಡಾ 73.98 ರಷ್ಟು ಖರ್ಚು ಮಾಡಿದೆ.

ಚುನಾವಣಾ ಆಯೋಗವು ರಾಷ್ಟ್ರೀಯ ಸ್ಥಾನಮಾನವನ್ನು ನೀಡಿದ ಎಂಟು ಪಕ್ಷಗಳಲ್ಲಿ ಬಿಜೆಪಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಬಹುಜನ ಸಮಾಜ ಪಕ್ಷ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com