ದೆಹಲಿ ನೂತನ ಸಚಿವರಾಗಿ ಅತಿಶಿ, ಸೌರಭ್ ಭಾರದ್ವಾಜ್ ನೇಮಕ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಆಮ್ ಆದ್ಮಿ ಪಕ್ಷದ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರನ್ನು ದೆಹಲಿಯ ನೂತನ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.
ಅತಿಶಿ ಮತ್ತು ಸೌರಭ್ ಭಾರದ್ವಾಜ್
ಅತಿಶಿ ಮತ್ತು ಸೌರಭ್ ಭಾರದ್ವಾಜ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಆಮ್ ಆದ್ಮಿ ಪಕ್ಷದ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರನ್ನು ದೆಹಲಿಯ ನೂತನ ಸಚಿವರನ್ನಾಗಿ ನೇಮಕ ಮಾಡಿದ್ದಾರೆ. ಈ ಇಬ್ಬರು ಶಾಸಕರು ಪ್ರಮಾಣ ವಚನ ಸ್ವೀಕರಿಸಿದ ದಿನಾಂಕದಿಂದ ಈ ಆದೇಶ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಅತಿಶಿ, ಸೌರಭ್ ಭಾರದ್ವಾಜ್ ಅವರನ್ನು ದೆಹಲಿ ಸಂಪುಟಕ್ಕೆ ನೇಮಕ ಮಾಡುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್‌ಗೆ ಶಿಫಾರಸು ಮಾಡಿದ್ದರು. ಅದನ್ನು ಲೆಫ್ಟಿನೆಂಟ್ ಗವರ್ನರ್‌ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.

ಎಎಪಿ ಸಚಿವರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಇಂದು ಅಂಗೀಕರಿಸಿದ್ದು, ನೂತನ ಸಚಿವರನ್ನಾಗಿ ಅತಿಶಿ, ಸೌರಭ್ ಭಾರದ್ವಾಜ್ ಅವರನ್ನು ನೇಮಕ ಮಾಡಿದ್ದಾರೆ.

ದೆಹಲಿಯ ಕಲ್ಕಾಜಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅತಿಶಿ ಅವರು, ಸಿಸೋಡಿಯಾ ಅವರ ಶಿಕ್ಷಣ ತಂಡದ ಪ್ರಮುಖ ಸದಸ್ಯರಾಗಿದ್ದಾರೆ.

ಆತಿಶಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಪೂರ್ವ ದೆಹಲಿ ಕ್ಷೇತ್ರದಿಂದ ಬಿಜೆಪಿಯ ಗೌತಮ್ ಗಂಭೀರ್ ವಿರುದ್ಧ ಸೋತಿದ್ದರು.

ಇನ್ನು ಪಕ್ಷದ ರಾಷ್ಟ್ರೀಯ ವಕ್ತಾರರಾದ ಭಾರದ್ವಾಜ್ ಅವರು ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com